ಒತ್ತುವರಿ ತೆರವು: ಸೂಕ್ತ ಕ್ರಮಕ್ಕೆ ಮನವಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜೂ.15
ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ವೈಜ್ಞಾನಿಕ ಚಿಂತನೆ ನಡೆಸಿ, ಸೂಕ್ತವಾದ ತೀರ್ಮಾನವನ್ನು ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ಮನವಿ ಮಾಡಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಲ್. ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು.
ಸಭೆ ಕರೆಯಲು ತೀರ್ಮಾನ: ಒತ್ತುವರಿ ಖುಲ್ಲಾ ಸಮಸ್ಯೆ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ, ವೈಜ್ಞಾನಿಕ ಚಿಂತನೆ ನಡೆಸಿ ಈ ಭಾಗದ ಜನಪ್ರತಿನಿಧಿಗಳು ಹಾಗೂ ಸಣ್ಣ ಬೆಳೆಗಾರರನ್ನು ಕರೆದು ಚರ್ಚೆ ಮಾಡಿ ಸರ್ಕಾರ ಅಂತಿಮ ನಿರ್ಧಾರಕ್ಕೆ ಬರಬೇಕು. ಈ ಕುರಿತಂತೆ, ಕೂಡಲೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೃಷಿ, ಕಂದಾಯ, ಅರಣ್ಯ ಕಾನೂನು ಸಚಿವರ ಉಪಸ್ಥಿತಿಯಲ್ಲಿ ಸಭೆಯನ್ನು ಕರೆದು ತೀರ್ಮಾನಿಸಬೇಕೆಂದು ನಿರ್ಣಯ ಕೈಗೊಳ್ಳಲಾಯಿತು.
ಒತ್ತುವರಿ ಸೇರಿದಂತೆ, ಜಿಲ್ಲೆಯ ಪ್ರಮುಖ ಸಮಸ್ಯೆಗಳಾದ ನಕ್ಸಲ್, ಅಡಕೆ ಬೆಳೆಗಾರರ ಸಮಸ್ಯೆ, ಕುದುರೆಮುಖ, ಕಳಸಾ ಇನಾಂ ಜಮೀನು, ಭದ್ರಾ ಮೇಲ್ದಂಡೆ, ಬಯಲು ಭಾಗದಲ್ಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ನೀರಾವರಿ ಯೋಜನೆ ಸೇರಿದಂತೆ, ಪ್ರಮುಖ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಪಕ್ಷದ ಪ್ರಮುಖ ನಾಯಕರ ನಿಯೋಗ ತೆರಳಲು ನಿರ್ಣಯಿಸಲಾಯಿತು.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಪ್ರತಿ ಬ್ಲಾಕ್ ಹಂತದಲ್ಲಿ ಸಭೆ ಕರೆದು ಮುಂದಿನ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ತಯಾರಿಸಲು ಸೂಚನೆ ನೀಡಲಾಯಿತು.
ಬ್ಲಾಕ್ ಅಧ್ಯಕ್ಷರಿಗೆ ಸೂಚನೆ: ರಾಜ್ಯ ಮಟ್ಟದ ನಿಗಮ-ಮಂಡಳಿಗಳಿಂದ ಗ್ರಾಮ ಹಂತದವರೆಗಿನ ಸರ್ಕಾರದ ನಾಮ ನಿರ್ದೇಶನಕ್ಕೆ ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದಿರುವ ಕಾರ್ಯಕರ್ತರು ಹಾಗೂ ಮುಖಂಡರ ಅರ್ಜಿಯನ್ನು ಪಡೆದು ಅರ್ಹರ ಹೆಸರುಗಳನ್ನು ಜಿಲ್ಲಾ ಸಮಿತಿಗೆ ಸಲ್ಲಿಸಲು ಬ್ಲಾಕ್ ಅಧ್ಯಕ್ಷರಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಸಿದ್ಧಾರ್ಥ, ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಬಿ. ಮಲ್ಲಿಕಾರ್ಜುನ,
ಕೆಪಿಸಿಸಿ ಕಾರ್ಯದರ್ಶಿ ಬಿ.ಎನ್. ಚಂದ್ರಪ್ಪ, ಹಾಲಪ್ಪಗೌಡ, ಮುಖಂಡರಾದ ಟಿ.ಡಿ. ರಾಜೇಗೌಡ, ಕೆ.ಎಸ್. ಶಾಂತೇಗೌಡ ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್ ಸ್ವಾಗತಿಸಿದರು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

