'ಬೇಡಿಕೆಗನುಗುಣವಾಗಿ ರಸಗೊಬ್ಬರ ಪೂರೈಕೆ'
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜೂ.15
ಜಿಲ್ಲೆಯಾದ್ಯಂತ ಮುಂಗಾರು ಮಳೆ ಉತ್ತಮವಾಗಿ, ಬಿತ್ತನೆ ಕಾರ್ಯ ಬರದಿಂದ ಸಾಗಿದ್ದು, ರೈತರಿಗೆ ಬೇಡಿಕೆಗನುಗುಣವಾಗಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಣೆ ಮಾಡಬೇಕೆಂದು ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಬಿ.ಸಿ. ನರೇಂದ್ರ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕೃಷಿ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬೀಜ ಪೂರೈಕೆ: ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ಬಯಲುಸೀಮೆ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ಭರದಿಂದ ಸಾಗಿದ್ದು, ರೈತರಿಗೆ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಲು ಕಾರ್ಯಪ್ರವೃತ್ತರಾಗಬೇಕೆಂದು ಕೃಷಿ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಕೃಷಿ ಇಲಾಖಾಧಿಕಾರಿಗಳಿಂದ ಮಳೆ, ಬೆಳೆ, ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಔಷಧಿ ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆದ ಅವರು, ಸರ್ಕಾರವು ನಿಗದಿಪಡಿಸಿದ ದರದಲ್ಲಿ ರಸಗೊಬ್ಬರದ ಮಾರಾಟ ಹಾಗೂ ಕಲಬೆರಿಕೆ ರಸಗೊಬ್ಬರದ ಬಗ್ಗೆ ಅಧಿಕಾರಿಗಳು ಎಚ್ಚರವಹಿಸಬೇಕೆಂದರು.
ತೋಟಗಾರಿಕೆ, ರೇಷ್ಮೆ, ಪಶುವೈದ್ಯ, ಸಹಕಾರ ಹಾಗೂ ಮತ್ತಿತರ ಇಲಾಖಾ ಪ್ರಚಾಪ ಮಾಡಿ: ಅಧಿಕಾರಿಗಳಿಂದ ರೈತ ಬಾಂಧವರಿಗೆ ಸರ್ಕಾರದ ವತಿಯಿಂದ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಸೌಲಭ್ಯಗಳ ಬಗ್ಗೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದರು.
ಕೃಷಿ ಸಮಾಜದ ಸದಸ್ಯ ಕುಮಾರಸ್ವಾಮಿ, ಕೃಷಿ ಸಮಾಜದ ಸದಸ್ಯ ಎಂ. ಮಂಜುನಾಥಗೌಡ ಮಾತನಾಡಿದರು. ಸಭೆಯಲ್ಲಿ ರಾಜು, ಜಿಲ್ಲಾ ಕೃಷಿ ಸಮಾಜದ ಉಪಾಧ್ಯಕ್ಷ ಮಂಜುನಾಥ, ವಸಂತೇಗೌಡ, ಅಶೋಕ್ ಕುಮಾರ್, ಸದಾಶಿವ, ನಾಗರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

