ಚಿಕ್ಕಮಗಳೂರು

ಹುಣಸಘಟ್ಟ ಆಸ್ಪತ್ರೆ ಮೇಲ್ದರ್ಜೆಗೆ

Published On :

ತರೀಕೆರೆ: ತಾಲೂಕಿನ ಹುಣಸಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದ್ದಾರೆ.
 ಶನಿವಾರ ಸಮೀಪದ ಹುಣಸಘಟ್ಟದಲ್ಲಿ  ಅಟಲ್‌ಜೀ ಜನಸ್ನೇಹಿ ಕೇಂದ್ರ, ನಾಡ ಕಚೇರಿ ಉದ್ಗಾಟನೆ ನೆರವೇರಿಸಿ ನಂತರ ಗ್ರಾಮಸ್ಥರಿಂದ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಉಬ್ರಾಣಿ-ಅಮೃತಾಪುರ ಏತ ನೀರಾವರಿ ಯೋಜನೆಯಿಂದ ಏಕಕಾಲಕ್ಕೆ ಎಲ್ಲ ಕೆರೆಗಳಿಗೂ ನೀರು ಹಾಯಿಸಬೇಕು. ಎಲ್ಲರ ಸಹಕಾರದಿಂದ ತಾಲೂಕಿನ ಸಮಗ್ರ ಅಬಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.
 ಮಹೇಶ್ವರಮೂರ್ತಿ, ಎಂ.ಆರ್. ಲೋಹಿತ್, ನೀಲಕಂಠಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರವಿ ಶ್ಯಾನುಬೋಗ್, ಗಂಗಾಧರಯ್ಯ, ಎಂ.ಎಚ್. ಮಂಜುನಾಥ್, ಜಗದೀಶ್, ಶೇಖರಪ್ಪ, ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿದರು. ಮಂಜುನಾಥ್ ಶಾಸಕರಿಗೆ ಮನವಿ ನೀಡಿದರು. ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.
ಎ.ಎಸ್. ಈಶ್ವರಪ್ಪ, ಮಲ್ಲಿಕಾರ್ಜುನಪ್ಪ, ಶಿವಮೂರ್ತಿ, ಚಂದ್ರಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.