ಚಿಕ್ಕಮಗಳೂರು

'ಆದಾಯ ಹೆಚ್ಚಳಕ್ಕೆ ಸ್ವ ಉದ್ಯೋಗ ನಿರ್ವಹಿಸಿ'

Published On :

ಕ.ಪ್ರ.ವಾರ್ತೆ  ತರೀಕೆರೆ  ಜೂ. 17 ಮಹಿಳೆಯರು ಸ್ವಯಂ ಉದ್ಯೋಗ ನಿರ್ವಹಿಸಿ ಆದಾಯ ಹೆಚ್ಚಿಸಿಕೊಳ್ಳಬೇಂಕು ಎಂದು  ಪುರಸಭಾ ಸದಸ್ಯ ಟಿ.ಜಿ. ಅಶೋಕ್ ಕುಮಾರ್ ತಿಳಿಸಿದ್ದಾರೆ.
ಅವರು ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟ್ಟಣದ ಕಾಳಿಕಾಂಬ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಏರ್ಪಡಿಸಲಾಗಿದ್ದ ಅಗರಬತ್ತಿ ತರಬೇತಿ ಕಾರ್ಯಾಗಾರದ ಉದ್ಘಾಟಿಸಿ ಮಾತನಾಡಿದರು.
ಗುಣಮಟ್ಟದ ಪದಾರ್ಥ ತಯಾರಿಸಿ: ಮೇಣದ ಬತ್ತಿ, ಅಗರ ಬತ್ತಿ ಇತ್ಯಾದಿಗಳನ್ನು ಕೌಶಲ್ಯದಿಂದ ಗುಣಮಟ್ಟದ ಪದಾರ್ಥಗಳನ್ನಾಗಿ ತಯಾರಿಸಿ, ಅದರಿಂದ ಮಾರುಕಟ್ಟೆಯಲ್ಲಿ ಉತ್ತಮವಾದ ಬೇಡಿಕೆ ಬರುತ್ತದೆ. ಆದಾಯವೂ  ಹೆಚ್ಚಾಗುತ್ದದೆ ಎಂದು ಅವರು ತಿಳಿಸಿದ ಅವರು ಪುರಸಭೆ ವತಿಯಿಂದ ಸಂಘಕ್ಕೆ ಹೊಲಿಗೆ ಯಂತ್ರ ಕೊಡಿಸಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುವುದಾಗಿ ತಿಳಿಸಿದರು.
ಯೋಜನೆ ಸಮನ್ವಯಾಧಿಕಾರಿ  ಮಲ್ಲಮ್ಮ ಮಾತನಾಡಿ, ಮಹಿಳೆಯರು ಆರ್ಥಿಕ ಸಬಲರಾಗಬೇಕು, ಹೆಚ್ಚು ಉಳಿತಾಯ ಮಾಡಬೇಕು ಎನ್ನುವ ಹಿನ್ನಲೆಯಲ್ಲಿ ಯೋಜನೆ ವತಿಯಿಂದ ತರಬೇತಿ ನೀಡಲಾಗುತ್ತಿದೆ. ತರಬೇತಿ ನಂತರ ನಿರಂತರವಾಗಿ ಅಗರಬತ್ತಿ ತಯಾರಿಕೆಯಲ್ಲಿ ತೊಡಬಗೇಕು. ಉತ್ತಮ ಗುಣಮಟ್ಟದ ಅಗರಬತ್ತಿ ತಯಾರಿಸುವುದರಿಂದ ಬೇಡಿಕೆ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ನಾಗರತ್ನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕರ್ತರಾದ ನಾಗರತ್ನ, ದಾಕ್ಷಾಯಿಣಿ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಯೋಜನೆ ಸಮನ್ವಯಾಧಿಕಾರಿ ಮಲ್ಲಮ್ಮ ಅಗರಬತ್ತಿ ತಯಾರಿಕೆ ಬಗ್ಗೆ ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.