ಚಿಕ್ಕಮಗಳೂರು

ಉತ್ತಮ ಮಳೆ: ರೈತರಲ್ಲಿ ಹರುಷ

Published On :

ಬಾಳೆಹೊನ್ನೂರು: ಪಟ್ಟಣ ಹಾಗೂ ಸುತ್ತಮುತ್ತ ಮುಂಗಾರು ಚುರುಗೊಂಡಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಭರದಿಂದ ನಡೆಸುತ್ತಿದ್ದಾರೆ.
 ಕಳೆದ ಕೆಲ ದಿನಗಳಿಂದ ಹೋಬಳಿಯಾದ್ಯಂತ ಸಾಕಷ್ಟು ಮಳೆ ಬಂದಿದ್ದು, ಕೃಷಿಕರು ತಮ್ಮ ಕೃಷಿ ಜಮೀನಿನಲ್ಲಿ ವಿವಿಧ ಕಾರ್ಯಗಳನ್ನು ಕೈಗೊಂಡಿದ್ದಾರೆ.
ಸುತ್ತಮುತ್ತಲಿನ ಭತ್ತದ ಬೆಳೆಗಾರರು ದನದ ಸಗಣಿ ಗೊಬ್ಬರವನ್ನು ಗದ್ದೆಗೆ ಸಾಗಿಸಿ ಪ್ರಥಮ ಹಂತದ ಉಳುಮೆ ಕಾರ್ಯವನ್ನು ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ ಕೂಲಿ ಕಾರ್ಮಿಕರ ಕೊರತೆಯಿಂದ ಎಲ್ಲೆಡೆ ಉಳುಮೆ ಕಾರ್ಯವನ್ನು ಟ್ರ್ಯಾಕ್ಟರ್ ಹಾಗೂ ಟ್ರಿಲ್ಲರ್‌ಗಳ ಮುಖಾಂತರ ಮಾಡಿಸುತ್ತಿದ್ದಾರೆ.
 ಇನ್ನು ಬತ್ತದ ಸಸಿ ನಾಟಿಗೆ ಅಗತ್ಯವಾದ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಕೊಂಡು ಬತ್ತದ ಸಸಿ ಮಡಿಗಳನ್ನು ತಯಾರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಅಲ್ಲದೇ ಅಡಕೆ ಬೆಳೆಗಾರರೂ ಮುಂಗಾರಿನ ಸಮಯದಲ್ಲಿ ತೋಟಕ್ಕೆ ಉತ್ತಮ ಗುಣಮಟ್ಟದ ಗೊಬ್ಬರ ನೀಡಲು ಸಹಕಾರ ಸಂಘಗಳಲ್ಲಿ ವಿವಿಧ ಗೊಬ್ಬರ, ಔಷಧಿಗಳ ಖರೀದಿಗೆ ಮುಗಿಬಿದ್ದಿದ್ದಾರೆ.
ಎಲ್ಲೆಡೆ ಉತ್ತಮ ಮಳೆ ಬೀಳುತ್ತಿರುವ ಕಾರಣ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ಹರಿಯತೊಡಗಿದೆ. ಪಟ್ಟಣಕ್ಕೆ ಪ್ರಮುಖವಾಗಿ ನೀರೊದಗಿಸುವ ಭದ್ರಾನದಿಯಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಟ್ಟಾರೆ ಈ ಬಾರಿ ರೈತರು ಸೇರಿದಂತೆ ಎಲ್ಲಾ ವರ್ಗದವರು ಉತ್ತಮ ಮಳೆ ನಿರೀಕ್ಷೆಯಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.