ಚಿಕ್ಕಮಗಳೂರು

ಎಪಿಎಲ್ ಪಡಿತರದಾರರಿಗೆ ಅಕ್ಕಿ ನೀಡಿ: ಜೀವರಾಜ

Published On :

ಚಿಕ್ಕಮಗಳೂರು: ಎಪಿಎಲ್ ಪಡಿತರದಾರರಿಗೆ ಅಕ್ಕಿ ಕೊಡದೆ ಹೋದರೆ ಬಹಳಷ್ಟು ತೊಂದರೆಯಾಗಲಿದೆ. ಇದರಿಂದ ಮಧ್ಯಮ ವರ್ಗದವರಿಗೆ ಅನಾನೂಕೂಲವಾಗಲಿದೆ ಎಂದು ಶಾಸಕ ಡಿ.ಎನ್. ಜೀವರಾಜ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಎಪಿಎಲ್ ಪಡಿತರದಾರರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಜಾರಿಗೆ ತರಲಾಯಿತು. ಈಗ ಈ ಪದ್ಧತಿಯನ್ನು ಕೈಬಿಡುವುದರಿಂದ ಅಕ್ಕಿಯ ಬೆಲೆ ಧಾರಣೆ ಹೆಚ್ಚಳವಾಗಿ ಮಧ್ಯಮ ವರ್ಗದವರಿಗೆ ತೊಂದರೆಯಾಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
1ಕ್ಕೆ ದರದಲ್ಲಿ 30 ಕೆ.ಜಿ. ಅಕ್ಕಿ ಸ್ವಾಗತಾರ್ಹ. ಜೂನ್ ತಿಂಗಳಿಂದಲೇ ಜಾರಿಗೆ ತರಲಾಗುವುದೆಂದು ಸಿಎಂ ಹೇಳಿದ್ದರು. ಆದರೆ, ಇದೀಗ ಜುಲೈ ತಿಂಗಳಿಂದ ಜಾರಿಗೆ ತರುವುದಾಗಿ ಹೇಳಿದ್ದಾರೆ. ಇದರಿಂದ ಸರ್ಕಾರ ಹಿಂದಕ್ಕೆ ಸರಿಯಬಾರದು ಎಂದು ಹೇಳಿದರು.
ರಾಜ್ಯ ಸರ್ಕಾರ ಬಹಳಷ್ಟು ಆತುರದ ನಿರ್ಧಾರವನ್ನು ಪ್ರಕಟಿಸುತ್ತಿದೆ. ಗುಟ್ಕಾ ನಿಷೇಧ, ಗ್ರಾಮ ಸಭೆ ನಡೆಸದೆ ಇರುವ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದೆಂದು ಹೇಳಿದೆ. ಈ ವಿಚಾರದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಸಹ ಹೊಣೆಗಾರರನ್ನಾಗಿ ಮಾಡಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.