ಚಿಕ್ಕಮಗಳೂರು

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

Published On :

ಚಿಕ್ಕಮಗಳೂರು: ಯುವಜನ ಸೇವಾ ಮತ್ತು ಮೀನುಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಜೂ.18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂ.18 ರಂದು ಬೆಳಿಗ್ಗೆ 10 ಗಂಟೆಗೆ ನಗರಕ್ಕೆ ಆಗಮಿಸುವ ಸಚಿವರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. 11 ಗಂಟೆಗೆ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಬ್ಯಾರಿಗಳ ಒಕ್ಕೂಟದ ಕಾರ್ಯಕ್ರಮ, 3 ಗಂಟೆಗೆ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಚಿವರು ಅಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಜೂ. 19 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕ:ಕೇರಿಯಲ್ಲಿ ಸಭೆ, 11 ಗಂಟೆಗೆ ಜಿಲ್ಲಾ ಪಂಚಾಯ್ತಿಯಲ್ಲಿ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸುವ ಸಚಿವರು ಸಂಜೆ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಲಿದ್ದಾರೆ. ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗಡೆ ಅವರು ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆರೋಗ್ಯ ಸಚಿವರ ಪ್ರವಾಸ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಜೂ.18 ರಂದು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯಾಧಿಕಾರಿ ಕ:ಕೇರಿಯಲ್ಲಿ ಇಲಾಖಾ ಪ್ರಗತಿ ಪರಿಶೀಲನೆ, 11 ಗಂಟೆಗೆ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಬ್ಯಾರಿಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿ, ತೆರಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.