ಕೊಳಚೆ ಪ್ರದೇಶಕ್ಕೆ ಮೂಲ ಸೌಲಭ್ಯ ಕಲ್ಪಿಸಿ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಜೂ. 18
ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವ ಜನರಿಗೆ ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಚಿವರು, ಘನ ತ್ಯಾಜ್ಯ ವಸ್ತುಗಳ ವಿಲೇವಾರಿಗೆ ಸಂಬಂಧಿಸಿದಂತೆ ನಗರಸಭೆ ಮತ್ತು ಪುರಸಭೆಗಳ ಸಹಕಾರದೊಂದಿಗೆ ಆರೋಗ್ಯ ಇಲಾಖೆಯವರು ಕೆಲಸ ಮಾಡಬೇಕು.
ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವ ಜತೆಗೆ ಆರೋಗ್ಯದ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ವೈದ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.
ಅಂಕಿಅಂಶ ಬೇಡ: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತೆಗೆದುಕೊಂಡ ಕ್ರಮಗಳ ಬಗ್ಗೆ ಡಿಎಚ್ಓ ಡಾ. ನೀರಜ್ ಅವರು ಅಂಕಿಅಂಶ ನೀಡಲು ಮುಂದಾದಾಗ, ಅಂಕಿಅಂಶ ಬೇಡ.
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಅಡಿಯಲ್ಲಿ ಜಿಲ್ಲೆಗೆ ಎಷ್ಟು ಅನುದಾನ ಬಂದಿದೆ ಎಂದು ಸಚಿವರು ಪ್ರಸ್ನಿಸಿದಾಗ, ಈ ವರ್ಷದಲ್ಲಿ 5.75 ಲಕ್ಷ ರುಪಾಯಿ ಬಿಡುಗಡೆಯಾಗಿದೆ ಎಂದು ಡಿಎಚ್ಓ ಹೇಳಿದರು.
ಪಾರದರ್ಶಕತೆ: ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಅನುದಾನದ ಬಳಕೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಸಚಿವರು ಸೂಚಿಸಿದರು.
ಶಾಸಕ ಸಿ.ಟಿ. ರವಿ ಮಾತನಾಡಿ, ಇಂದು ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಡೆಂಘೀ ಜ್ವರದಿಂದ ಬಳಲುತ್ತಿದ್ದ ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಗ್ರಾಮದ ನಿವಾಸಿ ಲಕ್ಷ್ಮಣ್ ಮೃತಪಟ್ಟಿದ್ದಾನೆ ಎಂದು ಸಭೆಯ ಗಮನಕ್ಕೆ ತಂದರು.
ಆದರೆ, ಈ ಬಗ್ಗೆ ತಾಲೂಕು ವೈದ್ಯಾಧಿಕಾರಿ ಸಭೆಯಲ್ಲಿರುವುದರಿಂದ ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
1 ಲಕ್ಷ ಪರಿಹಾರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ, ಡೆಂಘೀನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಪ್ರಶ್ನಿಸಿದಾಗ ಸಚಿವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ವರದಿ ನೀಡಿದಲ್ಲಿ ತಲಾ ಒಂದು ಲಕ್ಷ ರುಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪರಿಕರ ಖರೀದಿಸಲು 2 ಲಕ್ಷ ರುಪಾಯಿ ಅನುದಾನ ನೀಡಲಾಗುತ್ತಿದೆ. ಪರಿಕರದ ಸಮಸ್ಯೆ ಎಲ್ಲೂ ಇಲ್ಲ ಎಂದು ಡಿಎಚ್ಓ ತಿಳಿಸಿದರು.
ಬಯೋವುಟ್ರಿಕ್ ಪದ್ಧತಿ: ಕೆಲವು ಆಸ್ಪತ್ರೆಗೆ ವೈದ್ಯರು ಸಕಾಲದಲ್ಲಿ ಬರುತ್ತಿಲ್ಲ ಎಂದು ಸಾರ್ವಜನಿಕರೋರ್ವರು ಸಚಿವರ ಗಮನಕ್ಕೆ ತಂದಾಗ, ವೈದ್ಯರ ಹಾಜರಾತಿಗಾಗಿ ಆಸ್ಪತ್ರೆಯಲ್ಲಿ ಬಯೋವುಟ್ರಿಕ್ ಪದ್ಧತಿ ಜಾರಿಗೆ ತರಲಾಗುವುದು ಎಂದು ಸಚಿವರು2 ತಿಳಿಸಿದರು.
ಸಭೆಯಲ್ಲಿ ಸಂಸದ ಜಯಪ್ರಕಾಶ್ ಹೆಗಡೆ, ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಶಾಸಕರಾದ ಶ್ರೀನಿವಾಸ್, ಬಿ.ಬಿ. ನಿಂಗಯ್ಯ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

