ಚಿಕ್ಕಮಗಳೂರು

ಜೂಜು ಅಡ್ಡೆ ಮೇಲೆ ದಾಳಿ: ಆರೋಪಿಗಳ ಬಂಧನ

Published On :

ಬಾಳೆಹೊನ್ನೂರು: ಅಕ್ರಮವಾಗಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಮೂವರನ್ನು ಇಲ್ಲಿನ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಇಲ್ಲಿನ ಸುದರ್ಶಿನಿ ಚಿತ್ರಮಂದಿರದ ಸಮೀಪ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದರು. ತಬ್ರೀಶ್, ತೌಫಿಕ್ ಹಾಗೂ ಜವೂರ್ ಎಂಬುವವರನ್ನು ಬಂಧಿಸಿದ್ದು, ಆರೋಪಿಗಳಿಂದ 2850 ವಶಪಡಿಸಿಕೊಳ್ಳಲಾಗಿದೆ. ಠಾಣಾಧಿಕಾರಿ ಟಿ.ಎಸ್. ಮಧು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಡುವಳ್ಳಿಯಲ್ಲಿ ಗ್ರಾಮಸಭೆ
ಸಮೀಪದ ಆಡುವಳ್ಳಿ ಗ್ರಾಮ ಪಂಚಾಯಿತಿಯ ಪ್ರಸಕ್ತ ಸಾಲಿನ ಗ್ರಾಮಸಭೆ ಸೋಮವಾರ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಮಹಮ್ಮದ್ ಇಫ್ತೆಖಾರ್ ಆದಿಲ್ ಮಾತನಾಡಿ, ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಗ್ರಾಮ ಹಾಗೂ ವಾರ್ಡ್ ಸಭೆಗಳು ಪೂರಕವಾಗಿದೆ. ಗ್ರಾಮ ಸಭೆಗಳಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡು ತಮ್ಮ ವ್ಯಾಪ್ತಿಯಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಿಳಿಸಿ ಸರ್ಕಾರಿ ಯೋಜನೆಗಳು ಸಫಲವಾಗುವಂತೆ ಮಾಡಬೇಕು ಎಂದರು.
ಆಡುವಳ್ಳಿ ಗ್ರಾ.ಪಂ. ಅಧ್ಯಕ್ಷ ಎನ್.ಎಚ್. ಚನ್ನಪ್ಪಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ನೋಡೆಲ್ ಅಧಿಕಾರಿ ಜ್ಯೋತಿಲಕ್ಷ್ಮಿ ಗ್ರಾಮಸಭೆಯ ಮಾಹಿತಿ ನೀಡಿದರು. ನರಸಿಂಹರಾಜಪುರ ತಾ.ಪಂ. ಸದಸ್ಯೆ ಸುಧಾ ಶಾಚಿತರಾಜ್, ಗ್ರಾ.ಪಂ. ಉಪಾಧ್ಯಕ್ಷೆ ಬಿ.ಸಿ. ಶಕೀಲಾ ಸುರೇಶ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.