ಅರ್ಜಿ ಆಹ್ವಾನ
ಚಿಕ್ಕಮಗಳೂರು: ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಆಧಾರ ಯೋಜನೆಯಡಿ ಸಣ್ಣ ವ್ಯಾಪಾರ ಚಟುವಟಿಕೆ ನಡೆಸಲು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ದುಡಿಯುವ ಬಂಡವಾಳವಾಗಿ 20 ಸಾವಿರ ಹಾಗೂ ವ್ಯಾಪಾರ ಚಟುವಟಿಕೆ ನಡೆಸಲು 15 ಸಾವಿರ ರು.ಗಳ ಲೋಹದ ಪೆಟ್ಟಿಗೆಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಜೂ. 29 ಕೊನೆಯ ದಿನವಾಗಿದ್ದು, ಮಾಹಿತಿಗಾಗಿ ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ತಾಲ್ಲೂಕು ಪಂಚಾಯಿತಿ ಆವರಣ, ಚಿಕ್ಕಮಗಳೂರು.
ಇಂದು ಪ್ರವಾಸ
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮತ್ತು ನಿರೀಕ್ಷಕರು ಜೂ. 20 ರಂದು ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ.ಅಂದು ಕೊಪ್ಪ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 12ಕ್ಕೆ ಹಾಗೂ ಶೃಂಗೇರಿಯ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 3ಕ್ಕೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸಗಳ ನಿಮಿತ್ತ ಅರ್ಜಿ ದೂರು ಸಲ್ಲಿಸಿದ್ದು, ತಮ್ಮ ಅರ್ಜಿಣದೂರನ್ನು ಸಂಬಂಧಪಟ್ಟ ಅಧಿಕಾರಿಯು ವಿಲೇವಾರಿ ಮಾಡದೆ ಸಮಸ್ಯೆಯನ್ನು ಬಗೆಹರಿಸದೆ ಇದ್ದಲ್ಲಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

