ಆದಾಯ ಬರುವ ಚಟುವಟಿಕೆ ಹಮ್ಮಿಕೊಳ್ಳಿ
ಕ.ಪ್ರ.ವಾರ್ತೆ, ನರಸಿಂಹರಾಜಪುರ, ಜೂ.19 ಸ್ತ್ರೀಶಕ್ತಿ ಸಂಘದ ಸದಸ್ಯರು ಸಂಘದಲ್ಲಿ ಆದಾಯ ಬರುವಂತಹ ಚಟುವಟಿಕೆ ಹಮ್ಮಿಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್ ಸಲಹೆ ನೀಡಿದರು.
ಅವರು ಬುಧವಾರ ಅಂಬೇಡ್ಕರ್ ಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ 2 ದಿನಗಳ ಸ್ತ್ರೀ ಶಕ್ತಿ ಗುಂಪಿನ ಸದಸ್ಯರಿಗೆ ಗೊಂಚಲು, ಗುಂಪು ಹಾಗೂ ಬ್ಲಾಕ್ ಸೊಸೈಟಿ ಬಲವರ್ಧನೆ ಕುರಿತು ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
22ಗೊಂತಲು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಜ್ಯೋತಿ ಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿ, 12 ಸ್ತ್ರೀ ಶಕ್ತಿ ಗುಂಪುಗಳಿಗೆ 1 ಗೊಂಚಲು ಗುಂಪು ಎಂದು ಪರಿಗಣಿಸಲಾಗಿದೆ. ತಾಲೂಕಿನಲ್ಲಿ 22 ಗೊಂಚಲು ಗುಂಪುಗಳಿವೆ. ಗೊಂಚಲು ಗುಂಪುಗಳನ್ನು ಸೇರಿಸಿ ಬ್ಲಾಕ್ ಸೊಸೈಟಿ ಮಾಡಲಾಗಿದೆ ಎಂದರು.
ಆಯ್ದ 30 ಸದಸ್ಯರಿಗೆ 2 ದಿನ ತರಬೇತಿ ಹಮ್ಮಿಕೊಂಡಿದ್ದು, ತರಬೇತಿಯಲ್ಲಿ ಸ್ವ ಉದ್ಯೋಗ ಮಾಡುವ ಬಗ್ಗೆ ಮೈರಾಡ ಸಂಸ್ಥೆಯಿಂದ ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಸ್ವಸಹಾಯ ಸಂಘದ ಸದಸ್ಯರಿಗೆ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರ, ಚಿಕ್ಕಮಗಳೂರು ಕಾಪ್ ಸೆಟ್ ಕೇಂದ್ರದಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆದು ತರಬೇತಿ ನೀಡುವ ಚಿಂತನೆ ಮಾಡಲಾಗುತ್ತಿದೆ. ಎಂದರು.
ಕಂಪ್ಯೂಟರ್ ತರಬೇತಿ ನೀಡಲು ಸದಸ್ಯರಿಗೆ ಜು. 2 ರಂದು ಸಂದರ್ಶನ ಏರ್ಪಡಿಸಲಾಗಿದೆ. ಆಯ್ಕೆಯಾದವರಿಗೆ ಕಂಪ್ಯೂಟರ್ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವೀಚಾರಕಿ ಬಂಗಾರಿ ಹೆಗಡೆ, ಸಂಪನ್ಮೂಲ ವ್ಯಕ್ತಿ ರತ್ನ, ಚಂದ್ರಾವತಿ, ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

