ಮೀಸಲಾತಿ ನೆಪ: ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯ
ಬೀರೂರು: ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆದಿದ್ದರೂ ಮೀಸಲಾತಿ ನೆಪವೊಡ್ಡಿ ಜನಪ್ರತಿನಿಧಿಗಳಿಗೆ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಲು ವಿಳಂಬ ಮಾಡುತ್ತಿದೆ ಎಂದು ಶಾಸಕ ವೈ.ಎಸ್. ವಿ. ದತ್ತ ಆರೋಪಿಸಿದರು.
ಬೀರೂರಿನ ಪ್ರವಾಸಿ ಮಂದಿರದಲ್ಲಿ ಜನರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಪಟ್ಟಣದ ಭಗವತ್ ನಗರ ರಸ್ತೆ ಸಮಸ್ಯೆ ಬಗೆ ಹರಿಸಲು ವಿಧಾನಸಭೆಯ ಅಧಿವೇಶನ ಸಮಯದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಚರ್ಚಿಸಿರುವುದಾಗಿ, ನಗರಾಭಿವೃದ್ಧಿ ಸಚಿವ ಖಮರುಲ್ ಇಸ್ಲಾಂ ರವರಿಗೆ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದು, ಆದಷ್ಟು ಶೀಘ್ರ ಈ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸ್ವಚ್ಛತೆ ಕಾಪಾಡಿ: ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಕಾಳಜಿ ವಹಿಸಲು ಸಾದ್ಯವಾಗುತ್ತಿಲ್ಲ. ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡವರಿಗೆ ನೆರವಾಗಲು ಕ್ರಮ ಕೈಗೊಳ್ಳಬೇಕು. ಡೆಂಘೀ ರಕ್ತ ಪರೀಕ್ಷೆ ಮಾಡಿಸಲು ಹೊರಗಿನ ಕ್ಲಿನಿಕ್ಗಳಿಗೆ ಬರೆಯದೇ ಆಸ್ಪತ್ರೆಯ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷಿಸಲು ಕ್ರಮ ಕೈಗೊಳ್ಳುವಂತೆ ಬೀರೂರು ವೈದ್ಯಾಧಿಕಾರಿಗೆ ಸೂಚಿಸಿದರು.
ಕಾಮಗಾರಿ ಪ್ರಗತಿ: ಭದ್ರಾ ಡ್ಯಾಂನಿಂದ ಕುಡಿಯುವ ನೀರು ಪೂರೈಕೆ ಯೋಜನೆಗೆ ಇದ್ದ ಅಡ್ಡಿ ಆತಂಕಗಳು ನಿವಾರಣೆಯಾಗಿ ಕಳೆದ ಸೋಮವಾರದಿಂದ ಕಾಮಗಾರಿ ಪ್ರಾರಂಭವಾಗಿದೆ. ಲಕ್ಕವಳ್ಳಿಯಲ್ಲಿ 24.5 ಮೀಟರ್ ಪೈಪ್ ಅಳವಡಿಸಲಾಗಿದೆ. ಈ ಕಾಮಗಾರಿ ಪ್ರಗತಿಯಲ್ಲಿದ್ದು ಸಪ್ಟೆಂಬರ್ ತಿಂಗಳ ಗೌರಿ ಗಣೇಶದ ಹಬ್ಬದ ಕೊಡುಗೆಯಾಗಿ ಬೀರೂರು ಕಡೂರು ಜನತೆಗೆ ಕುಡಿಯವ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಡೂರು ಬಾಲಕಿಯರ ಫ್ರೌಢಶಾಲೆಯ ಮುಖ್ಯ ಶಿಕ್ಷಕರೊಬ್ಬರು ದತ್ತಾರವರ ಅನುಪಸ್ಥಿತಿಯಲ್ಲಿ ಸಭೆ ನಡೆಸಿ ದತ್ತಾರವರು ಪಾಲ್ಗೊಂಡಂತೆ ಮಾಹಿತಿ ನೀಡಿ ದಾಖಲೆ ಪುಸ್ತಕಕ್ಕೆ ಸಹಿ ಪಡೆಯಲು ಬಂದಾಗ ಗರಂ ಆದ ಶಾಸಕರು, ಸುಮ್ಮ ಸುಮ್ಮನೆ ಹೆಸರು ನಮೂದಿಸಿ ಸಭೆ ನಡೆಸಿ ಸಹಿ ಕೇಳಲು ಬರಬೇಡಿ. ನನಗೆ ಸಮಸ್ಯೆಯ ಖುದ್ದು ಅರಿವಾಗಬೇಕು ಎಂದು ಸಹಿ ಹಾಕದೆ ದಾಖಲಾತಿ ಹಿಂದಿರುಗಿಸಿ ಮುಂದಿನ ಸಭೆಗೆ ಬರುವುದಾಗಿ ತಿಳಿಸಿ ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

