ಚಿಕ್ಕಮಗಳೂರು

ವಿದ್ಯಾರ್ಥಿಗಳು ಸಾಧನೆ ಗುರಿಯಾಗಿಸಿಕೊಳ್ಳಿ: ಕುಲಕರ್ಣಿ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಜೂ.20
ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆಗೈದು ತಮ್ಮ ಶಾಲೆಗಳಿಗೆ ಕೀರ್ತಿ ತರುವುದರ ಮೂಲಕ ದೇಶಕ್ಕೆ ಉತ್ತಮ ಪ್ರಜೆಯಾಗಬೇಕು ಎಂದು ಸರ್ಕಾರಿ ಅಭಿಯೋಜಕ ಕೆ.ಕೆ. ಕುಲಕರ್ಣಿ ಹೇಳಿದ್ದಾರೆ.
ನಗರದ ಬೇಲೂರು ರಸ್ತೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಯುವಶಕ್ತಿ ಮಾನವತಾ ವೇದಿಕೆ ಏರ್ಪಡಿಸಿದ್ದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇದನ್ನರಿತ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವ ಮೂಲಕ ಯಾವುದೇ ಖಾಸಗೀ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳೇ ಉತ್ತಮವೆಂದು ತೋರಿಸಿಕೊಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ವೇದಿಕೆ ಅಧ್ಯಕ್ಷ ಸತೀಶ್, ಬಡ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ವಂಚಿತರಾಗುವವರನ್ನು ಶಾಲೆಗಳಲ್ಲಿ ಗುರುತಿಸಿ ಅಂತಹ ವಿದ್ಯಾರ್ಥಿಗಳಿಗೆ ನಮ್ಮ ವೇದಿಕೆಯಿಂದ ನೋಟ್‌ಪುಸ್ತಕಗಳನ್ನು ವಿತರಿಸುತ್ತಿರುವುದು ಸಂತಸದ ವಿಷಯ ಎಂದರು. ಶಾಲೆಯ ಮುಖ್ಯೋಪ್ಯಾಧ್ಯಾಯಿನಿ ಎ.ಪಿ. ಸುಮಿತ್ರ ಮಾತನಾಡಿದರು.
ಇದೇ ಸಂದರ್ಭದಲ್ಲಿ ನೋಟ್ ಪುಸ್ತಕ ವಿತರಣೆಗೆ ಧನಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯದರ್ಶಿ ವಸೀಲ್ ಪಾಷ, ಶಿಕ್ಷಕ ಕುಮಾರಸ್ವಾಮಿ, ಮಂಜು, ಸಂಜು, ರಾಘವನ್, ಪ್ರಸನ್ನ, ಮಧು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.