ಚಿಕ್ಕಮಗಳೂರು

ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ಕಡೂರು ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ನಡೆಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರಸ್ತುತ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕಡೂರಿನ ಗಣಪತಿ ಪೆಂಡಾಲ್ ಸಮೀಪ, ವೈಶ್ಯ ಬ್ಯಾಂಕ್ ಮೇಲ್ಭಾಗ, ದತ್ತಾತ್ರಿ ನಗರ, ದೇವನೂರಿನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಕಡೂರು ಟೌನ್ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಕಡೂರು ಟೌನ್, ಬೀರೂರು, ಯಗಟಿ, ಪಂಚನಹಳ್ಳಿಯ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.  
ಅರ್ಜಿ ಸಲ್ಲಿಸಲು ಜು.16 ಕೊನೆಯದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿನಿಲಯ ಅಥವಾ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಲು  ಪ್ರಕಟಣೆಯಲ್ಲಿ ತಿಳಿಸಿದೆ.
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೀಘ್ರ ಲಿಪಿಗಾರರು- 9, ಬೆರಳಚ್ಚುಗಾರರು- 6, ಬೆರಳಚ್ಚು ನಕಲುಗಾರರು- 1, ಆದೇಶ ಜಾರಿಕಾರರ- 1 ಹಾಗೂ ಸೇವಕರ 12 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಶೀಘ್ರಲಿಪಿಗಾರರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಶೀಘ್ರಲಿಪಿ ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು, ಬೆರಳಚ್ಚುಗಾರರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ (ಹಿರಿಯ ಶ್ರೇಣಿ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾದವರು, ಬೆರಳಚ್ಚು ನಕಲುಗಾರರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ (ಕಿರಿಯ ಶ್ರೇಣಿ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾದವರು, ಜಾರಿಕಾರರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣದೊಂದಿಗೆ ವಾಹನ ಪರವಾನಗಿ ಹೊಂದಿದವರು ಹಾಗೂ ಸೇವಕರ ಹುದ್ದೆಗೆ 7ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 19 ಕೊನೆಯದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನ್ಯಾಯಾಲಯದ ಕಚೇರಿ ಅಥವಾ ನ್ಯಾಯಾಲಯಗಳ ಸೂಚನಾ ಫಲಕವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

ಉಚಿತ ನೇತ್ರ ತಪಾಸಣಾ ಶಿಬಿರ
ಬೀರೂರು: ಮಲೆನಾಡು ಅಡಕೆ ಮಾರಾಟ ಸಹಕಾರ ಸಂಘ ಮತ್ತು ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಸಂಘದ ಆವರಣದಲ್ಲಿ ಸದಸ್ಯರಿಗೆ ಎರಡು ದಿನಗಳ ಉಚಿತ ಕಣ್ಣು ತಪಾಸಣಾ ಶಿಬಿರ ಆರಂಭಗೊಂಡಿತು.
 ಶಂಕರ್ ಕಣ್ಣಿನ ಆಸ್ಪತ್ರೆಯ ಹಿರಿಯ ನೇತ್ರ ತಜ್ಞ ಡಾ. ವೀಣಾ ಮಾತನಾಡಿ, ಆಸ್ಪತ್ರೆಯಿಂದ ಹಮ್ಮಿಕೊಂಡಿರುವ ಕಣ್ಣು ಸಂರಕ್ಷಣೆಯ ಕಾರ್ಯಕ್ರಮಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದ ಮಾಹಿತಿ ನೀಡಿ, ಅತ್ಯಂತ ಕಾಳಜಿಯಿಂದ ಕಡಿಮೆ ಖರ್ಚಿನಲ್ಲಿ ಉತ್ತಮ ಸೇವೆ ಹಾಗೂ ಚಿಕಿತ್ಸೆ ನೀಡುತ್ತಿದ್ದೇವೆ. ಮಕ್ಕಳಲ್ಲಿ ವಿಟಮಿನ್ ಎ ಕೊರತೆಯಿಂದ ಇರುಳುಗಣ್ಣು, ಮೆಳ್ಳೆಗಣ್ಣು ದೋಷ ಕಂಡು ಬರುತ್ತದೆ. ಬಾಲ್ಯದಲ್ಲಿಯೇ ಈ ದೋಷ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದಲ್ಲಿ ಕಣ್ಣಿನ ರಕ್ಷಣೆ ಜೊತೆ ಅಂಧತ್ವ ತಡೆಯಬಹುದು. 12ರಿಂದ 16 ವರ್ಷದ ಮಕ್ಕಳಲ್ಲಿನ ದೃಷ್ಟಿ ದೋಷದ ಬಗ್ಗೆ ಜಾಗೃತಿ ಅಗತ್ಯ. 40 ವರ್ಷ ಮೇಲ್ಪಟ್ಟವರು, ಮಧು ಮೇಹದಿಂದ ಬಳಲುತ್ತಿರುವವರು, ದೃಷ್ಟಿ ದೋಷ ಉಳ್ಳವರು ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು, ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.
 ಶಂಕರ್ ಕಣ್ಣಿನ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಹೇಶ್ ಮಾತನಾಡಿ, ಟ್ರಸ್ಟ್‌ನಿಂದ ಕೈಗೊಂಡಿರುವ ಆರೋಗ್ಯ ಸಂರಕ್ಷಣೆಯ ಕಾರ್ಯಕ್ರಮಗಳು ಸೇವಾ ಸಂಸ್ಥೆಗಳ ಮಾಹಿತಿ ನೀಡಿ, 8 ರಿಂದ 10 ಜಿಲ್ಲೆಗಳ ಪಟ್ಟಣ ಹಾಗೂ ಗ್ರಾಮೀಣ ಭಾಗಗಳ ಜನರಿಗೆ ಉಚಿತ ಚಿಕಿತ್ಸಾ ಸೌಲಭ್ಯ ದೊರಕುತ್ತಿದೆ ಎಂದರು.  ಮ್ಯಾಮ್ಕೋಸ್ ಸಂಸ್ಥೆಯ ವ್ಯವಸ್ಥಾಪಕ ಮುರುಗೇಶ್ ಮಾತನಾಡಿ, ಬೀರೂರಿನಲ್ಲಿ 680 ನೊಂದಾಯಿತ ಸದಸ್ಯರಿದ್ದು ಸಾಕಷ್ಟು ಜನರಿಗೆ ಈ ಶಿಬಿರದ ಸೌಲಭ್ಯ ದೊರಕುತ್ತಿದೆ. 3 ವರ್ಷದಿಂದ ಸದಸ್ಯರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.