ಚಿಕ್ಕಮಗಳೂರು

ಬೆಲೆ ಏರಿಕೆಗೆ ಖಂಡನೆ

Published On :

ಕ.ಪ್ರ.ವಾರ್ತೆ, ತರೀಕೆರೆ,  ಜೂ.21
ಜನರ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಸಿ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ನಿಟಕಪೂರ್ವ ಅಧ್ಯಕ್ಷ ಎನ್. ಮಂಜುನಾಥ್ ತಿಳಿಸಿದ್ದಾರೆ.
ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶುಕ್ರವಾರ ಬಿಜೆಪಿ ಪಟ್ಟಣದಲ್ಲಿ ಏರ್ಪಡಿಸಿದ್ದ ಪ್ರತಿಭಟನಾ ಮೆರವಣಿಗೆ ನಂತರ ಮಿನಿವಿಧಾನ ಸೌಧದ ಬಳಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ತೈಲ ಬೆಲೆ ಏರಿಕೆಯಾಗುತ್ತಿದ್ದ ಹಾಗೆ ಹಿಂದೆ ಮತ್ತೊಂದರಂತೆ ಸಾಗಾಣಿಕೆ, ಉತ್ಪನ್ನ ಇತ್ಯಾದಿ ಇತರ ವಸ್ತುಗಳ ಬೆಲೆಯೂ ಏರುತ್ತಲೇ ಇದೆ.
ಗಾಯದ ಮೇಲೆ ಬರೆ ಎಳೆದಂತೆ ರಾಜ್ಯ ಸರ್ಕಾರವೂ ಕೆಎಸ್‌ಆರ್‌ಟಿಸಿ ಬಸ್ ದರ ಏರಿಸಿದೆ. ಬಸ್ ದರ ಏರಿಕೆಯನ್ನು ಸರ್ಕಾರ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ವಿಫಲ: ಮದ್ಯಮ ವರ್ಗದ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಆಧಾರ್ ಕಾರ್ಡ್ ವಿತರಣೆ ಅಸಮರ್ಪಕವಾಗಿದೆ, ಜನರು ಆಧಾರ ಕಾರ್ಡಿಗಾಗಿ ಎರಡು ದಿವಸ ಕಾಯುಂತಹ ಪರಿಸ್ಥಿತಿ ಇದೆ, ಕೇಂದ್ರ ಸರ್ಕಾರ ಎಲ್ಲ ರಂಗದಲ್ಲೂ ವಿಫಲವಾಗುತ್ತಿದೆ ಎಂದು ಅವರು ಆರೋಪಿಸಿದರು.
14 ಬಾರಿ: ಮ್ಯಾಮ್‌ಕೋಸ್ ನಿರ್ದೇಶಕ ಆರ್. ದೇವಾನಂದ್ ಮಾತನಾಡಿ, ಜನ ವಿರೋಧಿ ನೀತಿಯನ್ನು ಕೈಬಿಡಬೇಕು, 14 ಬಾರಿ ಪೆಟ್ರೋಲ್ ಬೆಲೆ ಏರಿಸಲಾಗಿದೆ, ಹೋಬಳಿಗೊಂದು ಆಧಾರ್ ಕಾರ್ಡ್ ವಿತರಣಾ ಕೇಂದ್ರವನ್ನು ಪ್ರಾರಂಭಿಸಲಿ, ವೆಟ್ ಸೆಸ್ ಭಾರವನ್ನು ಇಳಿಸಬೇಕು, ಆಡಳಿತಾತ್ಮಕ ವೆಚ್ಚವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು. ಟಿ.ಜಿ. ಸದಾನಂದ್, ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ರವಿಶಂಕರ್, ಅಜಯ್‌ಕುಮಾರ್ ಮಾತನಾಡಿದರು.
ಸಾಲು ಮರದಮ್ಮನವರ ದೇವಸ್ಥಾನದಿಂದ ಮಿನಿ ವಿಧಾಸೌಧದವರೆಗೆ ಏರ್ಪಡಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಆರ್. ದೇವಾನಂದ್, ಟಿ.ಜಿ. ಸದಾನಂದ್, ಆಜಯ್‌ಕುಮಾರ್, ನೀಲಮ್ಮ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಉಪವಿಭಾಗಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.