ಮಲೇರಿಯಾ ವಿರೋಧಿ ಮಾಸಾಚಾರಣೆ
ಕ.ಪ್ರ.ವಾರ್ತೆ, ಕಡೂರು, ಜೂ.21
ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚಾರಣೆ ಹಿನ್ನೆಲೆಯಲ್ಲಿ ಡೆಂಘೀ ಮತ್ತು ಚಿಕೂನ್ ಗುನ್ಯಾ ನಿಯಂತ್ರಣದ ಕುರಿತು ಅರಿವು ಮೂಡಿಸಲು ಪಟ್ಟಣದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶಾಲಾ ಮಕ್ಕಳು ಜಾಥಾ ನಡೆಸಿ ಜಾಗೃತಿ ಮೂಡಿಸಿದರು.
ಪುರಸಭೆ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ, ಕಂದಾಯ ಇಲಾಖೆ ಸಹಯೋಗದಲ್ಲಿ ನಡೆದ ಜಾಗೃತಿ ಜಾಥಾದಲ್ಲಿ ಪಟ್ಟಣದ ವಿವಿಧ ಶಾಲೆಗಳ ಸಾವಿರಾರು ಶಾಲಾ ಮಕ್ಕಳು, ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿ ತಾಲೂಕು ಕಚೇರಿ ಮುಂದೆ ಅರಿವು ಮೂಡಿಸುವ ಜಾಥಾಗೆ ಉಪ ತಹಸೀಲ್ದಾರ್ ಪಾಲಯ್ಯ ಚಾಲನೆ ನೀಡಿದರು.
ಜಾಥಾದಲ್ಲಿ ಮಕ್ಕಳು ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಡೆಂಘೀ ಮತ್ತು ಚಿಕೂನ್ ಗುನ್ಯಾ ನಿಯಂತ್ರಣದ ವಾಕ್ಯಗಳುಳ್ಳ ಘೋಷಣಾ ಫಲಕಗಳನ್ನು ಹಿಡಿದು ಸೊಳ್ಳೆಗಳ ನಿಯಂತ್ರಣಕ್ಕೆ ಮನೆಯ ಸುತ್ತಲಿನ ಪರಿಸರ ಸ್ವಚ್ಛತೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಫಲಕಗಳನ್ನು ಹಿಡಿದು ಮಕ್ಕಳು ಸಾಗಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಕೆ. ಪ್ರಭು, ಪುರಸಭೆ ಮುಖ್ಯಾಧಿಕಾರಿ ಕುಮಾರನಾಯ್ಕ, ಆರೋಗ್ಯ ಇಲಾಖೆಯ ರಮೇಶ್, ರಂಗನಾಥ್, ಕಂದಾಯಾಧಿಕಾರಿ ಸತ್ಯನಾರಾಯಣ, ವಿವಿಧ ಶಾಲೆಗಳ ಶಿಕ್ಷಣ ಇಲಾಖೆಯ ಎನ್.ಎಚ್. ಚಂದ್ರಪ್ಪ, ರಮೇಶ್, ನಿರಂಜನಮೂರ್ತಿ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
--
ಅರ್ಜಿ ಆಹ್ವಾನ
ಶೃಂಗೇರಿ: ಕರ್ನಾಟಕ ಮಹಿಳಾ ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಇಲಾಖೆ ಹಾಗೂ ತಾಲೂಕು ಶಿಶು ಅಭಿವೃದ್ಧಿ ಶೃಂಗೇರಿ ಇವರ ಆಶ್ರಯದಲ್ಲಿ ಉದ್ಯೋಗಿನಿ ಯೋಜನೆಯಡಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವರ್ಷದೊಳಗಿನ ವಯೋವುತಿಯುಳ್ಳ ಸ್ವಉದ್ಯೋಗ ಮಾಡಲು ಆಸಕ್ತಿಯುಳ್ಳ ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ. ತಾಲೂಕು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಕಚೇರಿಯಲ್ಲಿ ಅರ್ಜಿ ವಿತರಿಸಲಾಗುತ್ತಿದ್ದು, ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿ ಪಡೆದು ಜುಲೈ 27ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಟಿ.ಎಲ್. ಉಮೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

