ಚಿಕ್ಕಮಗಳೂರು

ವಿದ್ಯಾರ್ಥಿನಿಲಯಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
 ನಗರದ ರಾಮನಹಳ್ಳಿ, ಸುಮುಖನಗರ, ಎಐಟಿ ಸರ್ಕಲ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ, ನರಿಗುಡ್ಡೇನಹಳ್ಳಿಯ ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯ, ಮೆಟ್ರಿಕ್ ನಂತರದ ಸಾರ್ವಜನಿಕ ಮಾದರಿ ಬಾಲಕರ ವಿದ್ಯಾರ್ಥಿನಿಲಯ, ಸುಮುಖ ನಗರದ ಮೆಟ್ರಿಕ್ ನಂತರದ ಅಲ್ಪಸಂಖ್ಯಾತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
 ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.
ಯಶಸ್ವಿನಿ ನೊಂದಣಿ
ಗ್ರಾಮೀಣ ಸಹಕಾರಿ ರೈತರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ಯೋಜನೆ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆ ಪ್ರಸ್ತುತ ಸಾಲಿಗೆ ಜುಲೈ 15 ರಿಂದ ಆಗಸ್ಟ್ 31ರೊಳಗೆ ಸದಸ್ಯರು ನೋಂದಾಣಿ ಹಾಗೂ ನವೀಕರಣ ಮಾಡಿಕೊಳ್ಳಬಹುದಾಗಿದೆ.
 ಮಾಹಿತಿಗಾಗಿ ಹತ್ತಿರದ ಸಹಕಾರ ಸಂಘದ ಕಾರ್ಯನಿರ್ವಾಹಕ ಸಿಬ್ಬಂದಿ, ಸಹಕಾರ ಅಭಿವೃದ್ಧಿ ಅಧಿಕಾರಿ, ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಚಿಕ್ಕಮಗಳೂರು, ತರೀಕೆರೆ ಅಥವಾ ಸಹಕಾರ ಸಂಘದ ಉಪ ನಿಬಂಧಕರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.