ವಿಚಾರವಂತಿಕೆಯಿಂದ ಕಾರ್ಯ ನಿರ್ವಹಿಸಿ
ಚಿಕ್ಕಮಗಳೂರು: ಯಾವುದೇ ಕೆಲಸವನ್ನು ವಿಚಾರವಂತಿಕೆಯಿಂದ ನಿರ್ವಹಿಸಿದರೆ ಮಾತ್ರ ಬರುವ ಕೋಪವನ್ನು ನಿಯಂತ್ರಿಸಿಕೊಂಡರೆ ಸಂಭವಿಸಬಹುದಾದ ತಪ್ಪುಗಳನ್ನು ತಡೆಹಿಡಿಯಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಹೇಳಿದ್ದಾರೆ.
ಜಿಲ್ಲಾ ಉಪ ಕಾರಾಗೃಹದಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರಾಗೃಹ ವಾಸಿಗಳು ಕಾರಾಗೃಹದಲ್ಲಿ ಲಭ್ಯವಿರುವ ಗ್ರಂಥಾಲಯದ ಸದುಪಯೋಗ ಪಡಿಸಿಕೊಂಡು ಭವಿಷ್ಯದಲ್ಲಿ ಮಾದರಿ ವ್ಯಕ್ತಿಗಳಾಗುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡುವಂತೆ ಅವರು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸರ್ಕಾರಿ ಅಭಿಯೋಜಕ ಕೆ.ಕೆ. ಕುಲಕರ್ಣಿ ಶಿಕ್ಷೆ ಚೌಕಾಶಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ವಕೀಲರ ಸಂಘಧ ಅಧ್ಯಕ್ಷ ಕೆ.ಎಂ. ಅಬ್ದುಲ್ ಜಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಮಹದೇವಯ್ಯ, ಕಾರಾಗೃಹದ ಅಧೀಕ್ಷಕ ಎಂ. ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೈಲರ್ ಶಶಿಧರಮೂರ್ತಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

