ವಿದ್ಯಾರ್ಥಿ ಪರಿಷತ್ ಚುನಾವಣೆ
ನರಸಿಂಹರಾಜಪುರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 2013-14 ನೇ ಸಾಲಿನ ವಿದ್ಯಾರ್ಥಿ ಪರಿಷತ್ ಚುನಾವಣೆ ನಡೆಯಿತು. ವಿದ್ಯಾರ್ಥಿ ಸಂಘದ ಶಿಕ್ಷಕ ಕಾರ್ಯದರ್ಶಿ ಬಿ. ಸೀತಾರಾಮಯ್ಯ ಅವರ ಮಾರ್ಗದರ್ಶನದಲ್ಲಿ ನಡೆದ ಚುನಾವಣೆಯಲ್ಲಿ 10 ನೇ ತರಗತಿಯ ನಿತಿನ್ ಅಧ್ಯಕ್ಷರಾಗಿ, 9 ನೇ ತರಗತಿಯ ಸುಜಲಾ ಕಾರ್ಯದರ್ಶಿಯಾಗಿ, 8 ನೇ ತರಗತಿಯ ಸಯ್ಯದ್ ಮಿರ್ಜಾ ಖಜಾಂಚಿಯಾಗಿ ಆಯ್ಕೆಯಾದರು. ಎಲ್ಲಾ ತರಗತಿಯ ಒಟ್ಟು 18 ವಿದ್ಯಾರ್ಥಿಗಳು ತರಗತಿಯ ಪ್ರತಿನಿಧಿಗಳಾಗಿ ಆಯ್ಕೆಯಾದರು. ಕಾಲೇಜಿನ ಉಪ ಪ್ರಾಚಾರ್ಯ ಡಿ. ರಾಜಪ್ಪ, ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ನಾಳೆ ಪ್ರಗತಿ ಪರಿಶೀಲನಾ ಸಭೆ
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆ ಜೂ.25 ರಂದು ಬೆಳಿಗ್ಗೆ 10.30ಕ್ಕೆ ಶಾಸಕ ಡಿ.ಎನ್. ಜೀವರಾಜ್ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಲಿದೆ.
ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡೆಯಲ್ಲಿ 2012ನೇ ಸಾಲಿನಲ್ಲಿ ಹಾಗೂ ಹಿಂದಿನ 5 ವರ್ಷಗಳಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿಸಿರುವ ಕ್ರೀಡಾಪಟುಗಳಿಗೆ 2012ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಅರ್ಹ ಪ್ರಶಸ್ತಿ ಪತ್ರಗಳೊಂದಿಗೆ ಅರ್ಜಿಯನ್ನು ಜೂ. 29 ರೊಳಗಾಗಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ನಮೂನೆಗಳು ಕಚೇರಿಯಲ್ಲಿ ಹಾಗೂ ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು, ದೂರವಾಣಿ ಸಂಖ್ಯೆ 08262- 220324 ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದಂತಹ ಹಿರಿಯ ಕ್ರೀಡಾಪಟುಗಳು, ತರಬೇತುದಾರರನ್ನು ಗುರುತಿಸಿ ಹಿರಿಯ ಕ್ರೀಡಾಪಟುಗಳಿಗೆಣತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳನ್ನು ಕೊಡುಗೆಯಾಗಿ ನೀಡಿ ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರಬೇಕು. ಆಸಕ್ತ ಹಿರಿಯ ಕ್ರೀಡಾಪಟುಗಳುಣತರಬೇತುದಾರರು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಅರ್ಹ ದಾಖಲಾತಿಗಳೊಂದಿಗೆ ಅರ್ಜಿಯನ್ನು ಜೂ.29ರೊಳಗಾಗಿ ಕಚೇರಿಗೆ ಸಲ್ಲಿಸಲು ಕೋರಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ತಿಳಿಸಿದೆ.
ಆನ್ಲೈನ್ ಮೂಲಕ ಸಕಾಲ ಸೇವೆ
ಶಿವಮೊಗ್ಗ: ಸರ್ಕಾರ ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮಗಳಡಿ ನೀಡುತ್ತಿರುವ ಸೇವೆಯನ್ನು ಆನ್ಲೈನ್ ಮೂಲಕ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸಕಾಲದ ಮನವಿಗಳನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸುಪ್ರೀಂ ಆದೇಶದಂತೆ ಗುಟ್ಕಾ ನಿಷೇಧ
ಕೊಪ್ಪ: ಸುಪ್ರೀಂ ಕೋರ್ಟ್ ಆದೇಶದಂತೆ ಗುಟ್ಕಾ ನಿಷೇಧ ಮತ್ತು ಒತ್ತುವರಿ ತೆರವು ಕಾರ್ಯವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆಯೇ ಹೊರತು ರೈತರಿಗೆ ಅನ್ಯಾಯ ಮಾಡುವ ದೃಷ್ಟಿಯಿಂದ ಅಲ್ಲ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಜಿ.ಆರ್. ಲೋಬೋ ಹೇಳಿದರು.
ಭಾನುವಾರ ಕಾಂಗ್ರೇಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರ ಅಡಕೆ ಬೆಳಗಾರಿಗೆ ಅನ್ಯಾಯವಾಗದಂತೆ ಅದಕ್ಕೆ ಬೇಡಿಕೆ ಸೃಷ್ಟಿಸುವ ಸಲುವಾಗಿ ವಿನೂತ ಯೋಜನೆ ರೂಪಿಸುವ ಉದ್ದೇಶದಿಂದ ಕಾರ್ಯ ಪ್ರವೃತ್ತವಾಗಿದೆ ಎಂದರು.
ಹಲವು ಕಾರ್ಯಕ್ರಮ: ಗ್ರಾಮೀಣ ಪ್ರದೇಶದ ಜನಸಾಮಾನ್ಯರ ಅಭಿವೃದ್ಧಿಗಾಗಿ ಶ್ರಮಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮ ಹಾಕಿಕೊಂಡಿದ್ದು, ಅದರಲ್ಲಿ ಬಿಪಿಎಲ್ ಪಡಿತರದಾರರಿಗೆ ರು. 1ಕ್ಕೆ 1. ಕೆ.ಜಿ ಅಕ್ಕಿ ನೀಡುವ ಎಲ್ಲಾ ತಯಾರಿ ಮುಗಿದಿದೆ. ಸರ್ಕಾರ ರಚನೆಯಾದ ಮೊದಲನೇ ಹಂತದಲ್ಲಿ ಜನಪರ ತೀರ್ಮಾನಗಳು ಮತ್ತು ಆದೇಶ ನೀಡುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರುವ ಎಲ್ಲಾ ಪ್ರಯತ್ನ ಮಾಡಲಾಗಿದೆ ಎಂದರು.
ಹಂತ ಹಂತವಾಗಿ ಭ್ರಷ್ಟ ಅಧಿಕಾರಿಗಳನ್ನು ತಿದ್ದಿ, ಪರಿಸ್ಥಿತಿಯನ್ನು ಹತೋಟಿಗೆ ತಂದು ರಾಜ್ಯದಲ್ಲಿ ಜನಪರ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ನಮ್ಮ ನಾಯಕರು ಶ್ರಮಿಸುತ್ತಿದ್ದಾರೆ ಎಂದರು. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶೋಭಿಂತ್, ಜಿಲ್ಲಾ ಉಪಾಧ್ಯಕ್ಷ ಎಚ್.ಜಿ. ವೆಂಕಟೇಶ್, ಕಾಂಗೆಸ್ ಮುಖಂಡ ಎಚ್.ಎಂ. ನಟರಾಜ್, ಎಚ್.ಎಂ. ಸತೀಶ್, ಅಸಗೋಡು ನಾಗೇಶ್, ಎ.ಸಿ. ವಜ್ರಪ್ಪ, ಒಣಿತೋಟ ರತ್ನಾಕರ, ಪಪಂ ಸದಸ್ಯ ಸುಬ್ರಮಣ್ಯ, ಹರೀಶ್ ಭಂಡಾರಿ ಹಾಜರಿದ್ದರು.
ನಾಳೆ ಕೆಡಿಪಿ ಸಭೆ
ಶೃಂಗೇರಿ: ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಡಿ.ಎನ್. ಜೀವರಾಜ್ ಅಧ್ಯಕ್ಷತೆಯಲ್ಲಿ ಜೂ.25ರಂದು ಮಂಗಳವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ.
ಬೆಳಗ್ಗೆ 10.30ರಿಂದ ಸಭೆ ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

