ಮಂಜುನಾಥ್ಗೆ ಪತ್ರಕರ್ತರ ಸಂಘ ಸಂತಾಪ
ಮೂಡಿಗೆರೆ: ಬೆಂಗಳೂರು ಗ್ರಾಮಾಂತರ ಭಾಗದ ಹೊಸಕೋಟೆ ಸಮೀಪದ ಚಿಕ್ಕತಗಳಿ ಗ್ರಾಮದಲ್ಲಿ ವರದಿ ಮಾಡಲು ತೆರಳಿದಾಗ ಕಾಡಾನೆ ತುಳಿತಕ್ಕೆ ಬಲಿಯಾದ ವಿಜಯವಾಣಿ ವರದಿಗಾರ ಮಂಜುನಾಥ್ಗೆ ಮೂಡಿಗೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತಾಲೂಕು ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ. ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಸಂಘಗಳು ರಾಜ್ಯದ ವಿವಿಧ ಭಾಗದಲ್ಲಿ ಕಾಡಾನೆಗಳು ಊರೊಳಗೆ ನಿರಂತರ ಲಗ್ಗೆಯಿಡುತ್ತಿದ್ದರೂ ಅವುಗಳ ಆರ್ಭಟ ತಡೆಗಟ್ಟುವಲ್ಲಿ ಅರಣ್ಯ ಇಲಾಖೆಗಳು ಸಂಪೂರ್ಣ ವಿಫಲವಾಗಿದೆ. ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಬಾರದಂತೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೆ. ಮಂಜುನಾಥ್, ಗೌರವಾಧ್ಯಕ್ಷ ಹೊರಟ್ಟಿ ರಘು ಸದಸ್ಯರು ಹಾಗೂ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್. ಉದಯಶಂಕರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

