ಹದಿಹರೆಯ ಸಮಸ್ಯೆಗೆ ಸ್ಪಂದನೆ ಅತಿ ಅಗತ್ಯ: ಡಾ. ಭುವನೇಶ್ವರಿ
ಶೃಂಗೇರಿ: ಹದಿಹರೆಯ ಜೀವನದ ಬದಲಾವಣೆ ಪ್ರಮುಖ ಘಟ್ಟವಾಗಿದ್ದು, ಈ ವಯಸ್ಸಿನಲ್ಲಿ ಅವರಲ್ಲಿ ದೈಹಿಕವಾಗಿ, ಮಾನಸಿಕವಾಗಿ ಅನೇಕ ಬದಲಾವಣೆಗಳು ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಹದಿಹರೆಯದವರ ಸಮಸ್ಯೆಗಳಿಗೆ ಸ್ಪಂದನೆ ಅಗತ್ಯವಾಗಿದೆ ಎಂದು ಡಾ. ಭುವನೇಶ್ವರಿ ಬಲ್ಲಾಳ್ ಸಲಹೆ ನೀಡಿದರು.
ಪಟ್ಟಣದ ಜೇಸಿ ಪ್ರೌಢಶಾಲಾ ವಿಭಾಗದ ಹೆಣ್ಣು ಮಕ್ಕಳಿಗೆ ಜೇಸೀರೇಟ್ ಆಯೋಜಿಸಿದ್ದ ಹದಿಹರೆಯದ ಸಮಸ್ಯೆ ಹಾಗೂ ಪರಿಹಾರ ಕುರಿತ ಮಾಹಿತಿ, ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಮನ ಅಗತ್ಯ: ಹೆಣ್ಣು ಮಕ್ಕಳ ಹದಿಹರೆಯದ ಸಂದರ್ಭದಲ್ಲಾಗುವ ದೈಹಿಕ ಬೆಳವಣಿಗೆಗೆ ಹಾಗೂ ಬದವಾವಣೆಗಳ ಬಗ್ಗೆ ಸಮರ್ಪಕವಾದ ಮಾಹಿತಿಗಳು ದೊರಕದೇ ಹೋದರೆ ಮುಂದಿನ ದಿನಗಳಲ್ಲಿ ಅವರಲ್ಲಿ ಮಾನಸಿಕ ದೌರ್ಬಲ್ಯ ಮೂಡಿ ಅನೇಕ ಸಮಸ್ಯೆಗಳಿಗೆ ಕಾರಣವಾಗಬಲ್ಲದು. ಆದ್ದರಿಂದ ಈ ವಯಸ್ಸಿನಲ್ಲಿ ಹೆಣ್ಣುಮಕ್ಕಳಿಗೆ ದೈಹಿಕ, ಮಾನಸಿಕ ಆರೋಗ್ಯದ ರಕ್ಷಣೆಯ ಬಗ್ಗೆ ಗಮನ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಪೋಷಕಾಂಶಗಳ ಕೊರತೆಯಿಂದಲೂ ಅನೇಕ ಸಮಸ್ಯೆಗಳು ಉಂಟಾಗುತ್ತದೆ. ಹೆಣ್ಣುಮಕ್ಕಳು ಹದಿಹರೆಯದಲ್ಲಿ ಪೌಷ್ಟಿಕಾಂಶ ಹಾಗೂ ವಿಟಾಮಿನ್ ಉಳ್ಳ ಆಹಾರ, ತರಕಾರಿ ಪದಾರ್ಥಗಳನ್ನು ಹೆಚ್ಚಾಗಿ ಉಪಯೋಗಿಸಬೇಕು. ಇದರಿಂದ ಹದಿಹರೆಯದ ಸಮಸ್ಯೆಗಳನ್ನು ತಡೆಗಟ್ಟಬಹುದಾಗಿದೆ. ಅಲ್ಲದೇ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದರು. ಜೇಸೀರೇಟ್ ಅಧ್ಯಕ್ಷೆ ರೇಖಾ ಬಾಲಗಂಗಾಧರ್, ಭಾಗ್ಯ ಪ್ರಕಾಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

