ಚಿಕ್ಕಮಗಳೂರು

ಅತ್ಯಾಚಾರ: ಆರೋಪಿಗಳ ಬಂಧಿಸಲು ಆಗ್ರಹ

Published On :

ನರಸಿಂಹರಾಜಪುರ: ಮಣಿಪಾಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಶೆಟ್ಟಿಕೊಪ್ಪದಲ್ಲಿ ವಿವಿಧ ಸಂಘ- ಸಂಸ್ಥೆಗಳು ಹಾಗೂ ಗ್ರಾಮಸ್ಥರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶೆಟ್ಟಿಕೊಪ್ಪದ ನವಗ್ರಾಮದಿಂದ ಹೊರಟ ಮೆರವಣಿಗೆಯು ಕಡಹಿನಬೈಲು ಗ್ರಾಮ ಪಂಚಾಯ್ತಿ ಕಚೇರಿಯವರೆಗೆ ನಡೆಯಿತು. ಗ್ರಾಮ ಪಂಚಾಯ್ತಿ ಕಚೇರಿ ಎದರು ನಡೆದ ಪ್ರತಿಭಟನಾ ಸಭೆಯಲ್ಲಿ ತಾಲೂಕು ಯುವ ಜನ ಒಕ್ಕೂಟದ ಮಾಜಿ ಅಧ್ಯಕ್ಷ ಎನ್.ಎಂ. ಕಾಂತರಾಜ್ ಮಾತನಾಡಿ, ವಿವಿಧತೆಯಲ್ಲಿ ಏಕತೆ ಕಂಡ ಭಾರತ ದೇಶದಲ್ಲಿ ಇಂತಹ ಕೃತ್ಯ ನಡೆಯಬಾರದು. ಭಾರತೀಯ ಸಂಸ್ಕೃತಿಗೆ ಕುಂದು ಬರುವಂತಹ ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ದುಷ್ಟಶಕ್ತಿಗಳನ್ನು ದಮನ ಮಾಡಬೇಕು ಎಂದರು.
ಗೌರವ ವಾತಾವರಣ ರೂಪಿಸಿ: ಮಹಿಳೆಯರ ಮೇಲೆ ಮೇಲೆ ಅತ್ಯಾಚಾರ ಮಾಡುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ರೂಪಿಸಬೇಕು. ಮಣಿಪಾಲಿನಲ್ಲಿ ನಡೆದ ಅತ್ಯಾಚಾರದ ಪ್ರಕರಣದಲ್ಲಿ ಬಾಗಿಯಾದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕಾರ್ಯ ನಡೆದಿದ್ದು ಮಹಿಳೆಯರನ್ನು ಗೌರವದಿಂದ ಕಾಣುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಒತ್ತಾಯಿಸಿದರು.
ಶೆಟ್ಟಿಕೊಪ್ಪ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮಿತಿ ಕಾರ್ಯದರ್ಶಿ ಎಂ. ಮಹೇಶ್ ಮಾತನಾಡಿ, ಮಹಿಳೆಯರಿಗೆ ರಕ್ಷಣೆ ಕೊಡಲು ಸರ್ಕಾರವು ವಿಫಲವಾಗುತ್ತಿದೆ. ನಿರಂತರವಾಗಿ ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿದೆ. ಮಹಿಳೆಯರಿಗೆ ಸರ್ಕಾರವು ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಮಹಿಳಾ ಮುಖಂಡರಾದ ಜಲಜಾಕ್ಷಮ್ಮ, ಯವಕ ಸಂಘ, ಯುವತಿ ಮಂಡಳಿಯ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು, ಶೆಟ್ಟಿಕೊಪ್ಪ ಬರ್ಕ್ ಮನ್ ಪ್ರೌಢಶಾಲೆ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು. ನಂತರ ಗ್ರಾಪಂ ಪಿಡಿಒ ಮುಖಾಂತರ ಮನವಿ ಪತ್ರವನ್ನು ರಾಜ್ಯಪಾಲರಿಗೆ ಅರ್ಪಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.