ಇಂದು ಕೆಡಿಪಿ ಸಭೆ
ಶೃಂಗೇರಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಭೆ ಬೆಳಿಗ್ಗೆ 10.30 ರಿಂದ ಆರಂಭವಾಗಲಿದ್ದು ಶಾಸಕ ಡಿ.ಎನ್. ಜೀವರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ತಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಸಾಲ, ಬಡ್ಡಿ ಮನ್ನಾ ಒತ್ತಾಯ
ಮೂಡಿಗೆರೆ: ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ಸರ್ಕಾರ ಸಾಲ ಮತ್ತು ಬಡ್ಡಿ ಮನ್ನಾ ಯೋಜನೆಗಳ ಸೌಲಭ್ಯಗಳನ್ನು ನೀಡುವಂತೆ ಮೂಡಿಗೆರೆ ಸಂಘದ ಅಧ್ಯಕ್ಷ ಹಾಗೂ ಆದಿವಾಸಿ ರಕ್ಷಣಾ ಪರಿಷತ್ತಿನ ಜಂಟಿ ಕಾರ್ಯದರ್ಶಿ ಮುತ್ತಪ್ಪ ಒತ್ತಾಯಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ 23 ಎಸ್ಟಿ ಲ್ಯಾಂಪ್ಸ್ ಸಹಕಾರ ಸಂಘಗಳಿವೆ. ಮೂಡಿಗೆರೆ, ಕೊಪ್ಪ ಲ್ಯಾಂಪ್ಸ್ ಸಹಕಾರ ಸಂಘಗಳು ರಾಜ್ಯದಲ್ಲೇ ಪ್ರತಿಷ್ಠಿತ ಸಹಕಾರ ಸಂಘಗಳು. ಸರ್ಕಾರ ಸಾಲ ಮನ್ನಾದ ಹಣವನ್ನು ಸಂಘಕ್ಕೆ ಜಮಾ ಮಾಡಿದಲ್ಲಿ ಗಿರಿಜನರಿಗೆ ಅನುಕೂಲ ಮಾಡಲು ಸಾಧ್ಯವಾಗುತ್ತದೆ. ಸರ್ಕಾರ ಸಾಲ, ಬಡ್ಡಿ ಮನ್ನಾ ಸೌಲಭ್ಯ ನೀಡುವಂತೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

