ಸ್ವಸಹಾಯ ಸಂಘದಲ್ಲಿ ಸಾಲ: ಆತ್ಮಹತ್ಯೆ
ಮೂಡಿಗೆರೆ: ಜೀವನದಲ್ಲಿ ಜಿಗೂಪ್ಸೆಗೊಂಡ ಮಹಿಳೆಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಪಟ್ಟಣದ ಬೀಜುವಳ್ಳಿ ಎಂಬಲ್ಲಿ ನಡೆದಿದೆ.
ನೇಣಿಗೆ ಶರಣಾದ ಮಹಿಳೆ ಸುಶೀಲ (30). ಸ್ವಸಹಾಯ ಸಂಘದಲ್ಲಿ 40 ಸಾವಿರ ಸಾಲಮಾಡಿ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣ ಮೂಡಿಗೆರೆ ಠಾಣೆಯಲ್ಲಿ ದಾಖಲಾಗಿದ್ದು. ತನಿಖೆ ನಡೆಸುತ್ತಿದ್ದಾರೆ.
100 ಟ್ರ್ಯಾಕ್ಟರ್ ಅಕ್ರಮ ಮರಳು ವಶ
ಮೂಡಿಗೆರೆ: ತಾಲೂಕಿನಲ್ಲಿ ಕಳೆದ ಜಿಲ್ಲಾಧಿಕಾರಿಗಳ ಆದೇಶದಂತೆ ತಹಸೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಪೊಲೀಸ್ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮ ಮರಳು ದಸ್ತಾನಿನ ಮೇಲೆ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಅಕ್ರಮ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳವಾರ ತಾಲೂಕಿನ ಹಂಡಗುಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹಾಗೂ ಟಿಪ್ಪರ್ಗಳನ್ನು ಬಳಸಿ ಬಚ್ಚಿಟ್ಟಿದ್ದ ಮರಳನ್ನು ಪತ್ತೆ ಹಚ್ಚಿದ್ದಾರೆ. ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, 100ಕ್ಕೂ ಹೆಚ್ಚಿನ ಟ್ರ್ಯಾಕ್ಟರ್ ಮರಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, 30 ಲಕ್ಷ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ.
ವಶ ಪಡಿಸಿಕೊಂಡಿರುವ ಮರಳುಗಳನ್ನು ಪ್ರವಾಸಿ ಮಂದಿರದಲ್ಲಿ ಇರಿಸಲಾಗಿದ್ದು. ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿ ನಾರಾಯಣ ಮಲ್ಯ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಗಣೇಶ್, ವೃತ್ತ ನಿರೀಕ್ಷಕ ರಮೇಶ್, ಬಣಕಲ್ ಠಾಣಾಧಿಕಾರಿ ಹೊಸ್ಕೇರಪ್ಪ, ಗೋಣಿಬೀಡು ಠಾಣಾಧಿಕಾರಿ ರೇವಣ್ಣ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಮಹೇಶ್ ಮತ್ತು ಕೊದಂಡರಾಮ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

