ಚಿಕ್ಕಮಗಳೂರು

ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Published On :

ಬಾಳೆಹೊನ್ನೂರು: ಮೇಗುಂದಾ ಹೋಬಳಿ ಭುವನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂತೊಳ್ಳಿ, ಹೆದ್ಸೆ ಗ್ರಾಮಸ್ಥರು ರಸ್ತೆ ದುರವಸ್ಥೆಯನ್ನು ಖಂಡಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟಿಸಿದರು.
ಲೋಕನಾಥಪುರದಿಂದ ಮುತೊಳ್ಳಿ, ಒಪ್ಪಗ ಮೂಲಕ ಹೆದ್ಸೆಗೆ ಸಾಗುವ ಪಂಚಾಯಿತಿ ರಸ್ತೆಗೆ ಕಳೆದ ಎರಡು ತಿಂಗಳ ಹಿಂದೆ ಪಂಚಾಯಿತಿ ವತಿಯಿಂದ ಒಂದು ಲಕ್ಷ ರೂಪಾಯಿ ವ್ಯಯಿಸಿ ಜಲ್ಲಿ ಹಾಕಲಾಗಿತ್ತು. ಆದರೆ, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಸಂಚಾರ ದುಸ್ತರವಾಗಿದೆ.
ಮೂತೊಳ್ಳಿ ಗ್ರಾಮದಲ್ಲಿ ಸುಮಾರು 400ಕ್ಕೂ ಅಧಿಕ ಜನ ವಾಸಿಸುತ್ತಿದ್ದು, ಗ್ರಾಮಕ್ಕೆ ಕುಡಿಯುವ ನೀರು, ವಿದ್ಯುತ್, ಸಮರ್ಪಕ ರಸ್ತೆ ಸೌಲಭ್ಯಗಳಿಲ್ಲದೇ ಪರದಾಡುವಂತಾಗಿದೆ. ರಸ್ತೆ ಅವ್ಯವಸ್ಥೆಯಿಂದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಪಟ್ಟಣಕ್ಕೆ ತೆರಳುವ ಗ್ರಾಮಸರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಪ್ರತಿಭಟನಾಕಾರರನ್ನು ಭುವನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣ ದುರಸ್ತಿಗೊಳಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು. ನಿಗದಿತ ಅವಧಿಯೊಳಗೆ ದುರಸ್ತಿ ನಡೆಸಲು ಸಂಬಂಧಪಟ್ಟವರು ವಿಫಲರಾದಲ್ಲಿ ಮುಖ್ಯರಸ್ತೆ ತಡೆದು ಪ್ರತಿಭಟಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರಾದ ಲಕ್ಷ್ಮೀನಾರಾಯಣ, ಎಂ.ಎಸ್. ಸುಬ್ರಹ್ಮಣ್ಯ, ಎಂ.ಪಿ. ನಾಗೇಶ್, ಮೂತೊಳ್ಳಿ ರವಿ, ಪದ್ಮಾ, ಎಂ.ಕೆ. ಗೋಪಾಲ, ರಮೇಶ, ಸದಾನಂದ, ಜಯಾ, ಸುಶೀಲ, ಬಾಬು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.