ತಾಪಂ ಅಧ್ಯಕ್ಷರಾಗಿ ಶಾಂತಾ ಆಯ್ಕೆ
ಕ.ಪ್ರ.ವಾರ್ತೆ ತರೀಕೆರೆ ಜೂ.26 ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗಾಗಿ ತಾಪಂಗೆ ಹೆಚ್ಚಿನ ಅನುದಾನ ಕೊಡಿಸಲು ತಾವು ಎಲ್ಲ ರೀತಿಯಲ್ಲಿ ಪ್ರಯತ್ನಿಸುವುದಾಗಿ ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದರು.
ಅವರು ತಾಪಂ ಸಭಾಂಗಣದಲ್ಲಿ, ಬುಧವಾರ ತಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಾಪಂಗೆ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಶಾಂತ ಗುರುಮೂರ್ತಿ ಅವರನ್ನು ಅಭಿನಂದಿಸಲು ಏರ್ಪಾಡಾಗಿದ್ದ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಸಿ.ಎಂ. ಜೊತೆ ಮಾತುಕತೆ: ಕ್ಷೇತ್ರದ ಅಭಿವೃದ್ಧಿ ಹಿನ್ನೆಲೆಯಲ್ಲಿ ತಾಪಂಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಈ ಬಗ್ಗೆ ತಾವು ಮುಖ್ಯಮಂತ್ರಿಗಳ ಜೊತೆ ಮಾತನಾಡಿ, ಹೆಚ್ಚಿನ ಅನುದಾನ ದೊರೆಯುವಂತೆ ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಅವರು ತಿಳಿಸಿದರು.
ತಾಪಂ ಸದಸ್ಯರಾಗಿ ಅಭಿವೃದ್ಧಿ ಕಾರ್ಯ ನಿರ್ವಹಿಸಿ, ಬಿಗಿಯಾದ ಆಡಳಿತ ನಡೆಸಿ. ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ, ತಾಲೂಕಿನ ಹಿಂದುಳಿದ ಪ್ರದೇಶಗಳಿಗೆ ಹೆಚ್ಚು ಒತ್ತು ನೀಡಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಬೇಕು ಎಂದು ಸೂಚಿಸಿದರು.
ರಾಜ್ಯವೇ ಮೊದಲು: ಮಾಜಿ ಶಾಸಕ ಎಸ್.ಎಂ. ನಾಗರಾಜ್ ಮಾತನಾಡಿ, 3 ವಿಧದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇಡೀ ರಾಷ್ಟ್ರಕ್ಕೆ ಮೊದಲು ಕರ್ನಾಟಕ ರಾಜ್ಯ ಜಾರಿಗೆ ತಂದಿದೆ. ಅಧಿಕಾರದ ಅವಧಿ ಮುಖ್ಯ ಅಲ್ಲ, ಎಲ್ಲಾ ಹಳ್ಳಿಗಳಿಗೆ ಅನುದಾನ ತಲುಪುವಂತೆ ನೋಡಿಕೊಳ್ಳಬೇಕು. ಎಲ್ಲರಿಗೂ ಸಮನಾಗಿ ಅನುದಾನ ಹಂಚಬೇಕು ಎಂದು ತಿಳಿಸಿದರು.
ಹಿರಿಯ ಕಾಂಗ್ರೆಸ್ ಮುಖಂಡ ಟಿ.ವಿ. ಶಿವಶಂಕರಪ್ಪ ಮಾತನಾಡಿ, ಅಧಿಕಾರ ಸಿಗುವುದು ಅಪರೂಪ, ದೊರೆತ ಕಾಲಾವಧಿಯಲ್ಲಿ ನೆನಪು ಉಳಿಯವಂತಹ ಕೆಲಸ ಮಾಡಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್, ಕೆ.ಆರ್. ಧೃವಕುಮಾರ್, ಜಿಪಂ ಸದಸ್ಯ ಕೆ.ಪಿ. ಕುಮಾರ್, ಹೇಮಾವತಿ ಕೃಷ್ಣಪ್ಪ, ತಾಪಂ ಸದಸ್ಯ ವಿರೂಪಾಕ್ಷಪ್ಪ, ಜಿಪಂ ಮಾಜಿ ಅಧ್ಯಕ್ಷ ಎಚ್. ವಿಶ್ವನಾಥ್ ಮೊದಲಾದವರು ಮಾತನಾಡಿ, ನೂತನ ಅಧ್ಯಕ್ಷೆ ಶಾಂತ ಗುರುಮೂರ್ತಿ ಅವರನ್ನು ಅಭಿನಂದಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಖಚಾಂಚಿ ಬಿ.ಎಸ್.ಆರ್. ಮಂಜುನಾಥ್, ದೋರನಾಳ್ ಪರಮೇಶ್, ಟಿ..ಎಂ. ರಾಜು, ಗುರುಮೂರ್ತಿ ತಾಪಂ ಸದಸ್ಯರು, ಪುರಸಭಾ ಸದಸ್ಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಾ.ಪಂ. ಸದಸ್ಯ ಸೀತಾರಾಂ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಲವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

