ಚಿಕ್ಕಮಗಳೂರು

ತೊಗರಿಹಂಕಲ್ ಹೈಸ್ಕೂಲ್‌ಎಸ್‌ಡಿಎಂಸಿ ರಚನೆ

Published On :

ತೊಗರಿಹಂಕಲ್ (ಚಿಕ್ಕಮಗಳೂರು ತಾ.): ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಅಸ್ತಿತ್ವಕ್ಕೆ ಬಂದಿದೆ. ಅಧ್ಯಕ್ಷರಾಗಿ ಸಂಜೀವ್ ಹಾಗೂ ಸದಸ್ಯರಾಗಿ ಮಂಜುಳಾ, ಅನ್ನಪೂರ್ಣ, ಸ್ಟೆಲ್ಲಾ ಮೇರಿ, ಎಂ. ಸೀನಾ, ಸುಮತಿ, ಆಲಿ, ದೇವರಾಜ್ ಹಾಗೂ ನಾಗರಾಜ್ ಆಯ್ಕೆಯಾಗಿದ್ದಾರೆ ಎಂದು ಕಾರ್ಯದರ್ಶಿ ಹಾಗೂ ಮುಖ್ಯೋಪಾಧ್ಯಾಯ ಕೆ.ಪಿ. ದೇವರಾಜ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಎಚ್.ಯು. ಹಮೀದ್, ಎಚ್.ಪಿ. ಸುಂದರ್ ಉಪಸ್ಥಿತರಿದ್ದರು.
ಇಂದು ಗುರಿತಿನ ಚೀಟಿ
ಚಿಕ್ಕಮಗಳೂರು: ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ, ಶಾಂತಿ ಚಾರಿಟಬಲ್ ಟ್ರಸ್ಟ್, ಸಾರ್ವಜನಿಕ ಆಸ್ಪತ್ರೆ, ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ತರೀಕೆರೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂ. 27 ರಂದು ಬೆಳಿಗ್ಗೆ 10 ಗಂಟೆಯಿಂದ ವಿಕಲಚೇತನರಿಗೆ ಸ್ಥಳದಲ್ಲೇ ಗುರುತಿನ ಚೀಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರೀಕೆರೆ ತಾಲೂಕಿನ ಗುರುತಿನ ಚೀಟಿ ಇಲ್ಲದ ವಿಕಲಚೇತನರು ತಮ್ಮ ಅಂಗವಿಕಲತೆ ತೋರುವ 2 ಫೋಟೊ ಹಾಗೂ ವಿಳಾಸ ದೃಢೀಕರಣಕ್ಕಾಗಿ ಪಡಿತರ ಚೀಟಿ ಅಥವಾ ವೋಟರ್ ಐಡಿ ಕಾರ್ಡ್‌ನೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಜ್ಞ ವೈದ್ಯರು ಗುರುತಿನ ಚೀಟಿಯನ್ನು ಪಡೆಯಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.