'ವಿಪ ಸದಸ್ಯರಿಂದ ದ್ವೇಷದ ರಾಜಕಾರಣ'
ಚಿಕ್ಕಮಗಳೂರು: ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಹಣವನ್ನು ತಡೆ ಹಿಡಿಯುವ ಮೂಲಕ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಕೆ. ಪ್ರಾಣೇಶ್ ಆರೋಪಿಸಿದ್ದಾರೆ.
ಅಭಿವೃದ್ಧಿ ಮತ್ತು ಸ್ನೇಹದ ರಾಜಕಾರಣ ಮಾಡಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸಲಹೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತ ನೋಡಿ ರಾಜ್ಯದ ಜನ ಬೇಸತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಚಿಕ್ಕಮಗಳೂರು ನಗರದ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ ಬಿಡುಗಡೆಯಾಗಿದ್ದ 20 ಕೋಟಿ ರುಪಾಯಿಯನ್ನು ವಿಧಾನಪರಿಷತ್ ಸದಸ್ಯರು ತಡೆ ಹಿಡಿದಿದ್ದಾರೆ ಎಂದು ಆರೋಪಿಸಿದರು.
65 ಕೋಟಿ ತಡೆ: ಚಿಕ್ಕಮಗಳೂರು ತಾಲೂಕಿನ ರಸ್ತೆ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ 20 ಕೋಟಿ ಹಾಗೂ ಕೊಪ್ಪ ತಾಲೂಕಿನಲ್ಲಿ ರಸ್ತೆ ಅಭಿವೃದ್ಧಿಗೆ ಮಂಜೂರಾದ 16 ಕೋಟಿ ಬಿಡುಗಡೆ ಮಾಡಬಾರದು. ಟೆಂಡರ್ ಕರೆಯಬಾರದು ಎಂದು ಗಾಯತ್ರಿ ಶಾಂತೇಗೌಡ ಅವರು ಲಿಖಿತವಾಗಿ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದು ಹೇಳಿದ ಪ್ರಾಣೇಶ್ ನಗರೋತ್ಥಾನ ಯೋಜನೆಯಡಿ ಜಿಲ್ಲೆಗೆ ಬಿಡುಗಡೆಯಾದ 65 ಕೋಟಿಯನ್ನು ಖರ್ಚಾಗದಂತೆ ತಡೆ ಹಿಡಿದಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ರಾಜಪ್ಪ, ವರಸಿದ್ಧಿ ವೇಣುಗೋಪಾಲ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಕನಕರಾಜ್ ಹಾಗೂ ನಗರಸಭಾ ಮಾಜಿ ಅಧ್ಯಕ್ಷ ತಮ್ಮಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

