ಚಿಕ್ಕಮಗಳೂರು

ಆಧಾರ ನೋಂದಣಿಗೆ ಮುಗಿಬಿದ್ದ ಜನ

Published On :

ಶಿವಮೊಗ್ಗ: ಆಯನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಧಾರ ನೋಂದಣಿ ಕೇಂದ್ರ ಆರಂಭಗೊಂಡಿದ್ದು, ನೂಕುನುಗ್ಗಲು ಉಂಟಾಗಿದೆ.
ಸರ್ಕಾರ ನೀಡುವ ವಿದ್ಯಾರ್ಥಿ ವೇತನ, ವಿವಿಧ ಸಬ್ಸಿಡಿ, ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪೋಷಕರು, ನಾಗರಿಕರು ಸರದಿ ಸಾಲಿನಲ್ಲಿ ನಿಂತು ಅರ್ಜಿ ಪಡೆಯಲು ಅತ್ಯಾಸಕ್ತಿ ತೋರಿಸಿದರು. ಈ  ವೇಳೆ ನೋಂದಣಿ ಕೇಂದ್ರದ ಬಳಿ ನೂಕುನುಗ್ಗಲಾಗಿ ಗೊಂದಲ ಉಂಟಾದ ಘಟನೆ ಸೋಮವಾರ ನಡೆಯಿತು.
ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ವಾತಾವರಣ ತಿಳಿಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಹಾಗೆಯೇ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು.
ಆಧಾರ ಕಾರ್ಡ್ ನೋಂದಣಿಗೆ ಅರ್ಜಿ ಪಡೆಯಲು ಯಾವುದೇ ಗೊಂದಲ ಬೇಡ. ಇದಕ್ಕೆ ಯಾವುದೇ ಕಾಲಮಿತಿ ಇರುವುದಿಲ್ಲ. ಪ್ರತಿ ನಿತ್ಯ ಅರ್ಜಿ ನೀಡಲಾಗುತ್ತದೆ ಎಂದು ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷರು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು.
ಪ್ರತಿ ನಿತ್ಯ ಬೆಳಿಗ್ಗೆ 10 ರಿಂದ 10.30ರವರೆಗೆ ಅರ್ಜಿ ವಿತರಿಸಲಿದ್ದು, ಅರ್ಜಿ ಪಡೆದ ಫಲಾನುಭವಿಗಳ ನೋಂದಣಿ ಕಾರ್ಯ ನಡೆಯಲಿದೆ. ಆಧಾರ್ ಫಲಾನುಭವಿಗಳು ವಿಳಾಸದ ದೃಢಿಕರಣ ಪತ್ರ, ಪಡಿತರ ಚೀಟಿ, ಗುರುತಿನ ಚೀಟಿಗಳನ್ನು ತಂದು ಅರ್ಜಿ ಪಡೆಯಬಹುದು ಹಾಗೂ ಕೇಂದ್ರ ಸರ್ಕಾರದ ಈ ಯೋಜನೆ ಸಂಪೂರ್ಣ ಉಚಿತವಾಗಿದ್ದು, ಯಾವೊಬ್ಬ ಅಧಿಕಾರಿಗೂ ಹಣ ನೀಡುವ ಅಗತ್ಯವಿಲ್ಲ ಎಂದು ಗ್ರಾ.ಪಂ.ಅಧ್ಯಕ್ಷರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.