ಚಿಕ್ಕಮಗಳೂರು

ವಿಕಲಚೇತನ ಮಕ್ಕಳ ಆರೋಗ್ಯ ತಪಾಸಣೆ

Published On :

ಭದ್ರಾವತಿ: ಸರ್ವ ಶಿಕ್ಷಣ ಅಭಿಯಾನ ಸಮಿತಿ ಆಶ್ರಯದಲ್ಲಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಗುರುವಾರ 6ರಿಂದ 14 ವರ್ಷ ವಯೋವುತಿಯೊಳಗಿನ ವಿವಿಧ ವಿಕಲತೆಯುಳ್ಳ ತಾಲೂಕಿನ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಶಿಬಿರದಲ್ಲಿ ತಾಲೂಕಿನ ವಿವಿಧ ಶಾಲೆಗಳ ಸುಮಾರು 450 ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.
ಬೆಂಗಳೂರಿನ ದೇವರಾಜ ಅರಸ್ ಸಂಶೋಧನಾ ಸಂಸ್ಥೆ ನಿರ್ದೇಶಕಿ ಪ್ರೊ. ಅನುರಾಧ ಪಟೇಲ್ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಸರ್ವಶಿಕ್ಷಣ ಉಪಯೋಜನಾ ಸಮನ್ವಯಾಧಿಕಾರಿ ಗಣಪತಿ, ಸಹಯೋಜನಾಧಿಕಾರಿ ಮುದ್ದಪ್ಪ ತಾಲೂಕು ಬಿಸಿಎಂ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಚಂದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸಿ. ಜಯಪ್ಪ ಮೊದಲಾದವರು ಹಾಜರಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಂ. ದಾರುಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಉಪಾಧ್ಯಕ್ಷೆ ಹೇಮಾಪಾವನಿ ವಿಕಲಚೇತನ ಮಕ್ಕಳಿಗೆ ನಿಗದಿತ ಸಮಯದಲ್ಲಿ ಸಾಧನ-ಸಲಕರಣೆಗಳನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಿಮ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಜೇಂದ್ರಪ್ಪ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ರುದ್ರಮುನಿ ಕಾರ್ಯಕ್ರಮ ನಿರೂಪಿಸಿದರು. ಟಿ.ಜಿ.ಬಾಬು ವಂದಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.