ಸರ್ಕಾರಿ ಸೌಲಭ್ಯ ಸದ್ಬಳಕೆಯಾಗಲಿ
ಕ.ಪ್ರ.ವಾರ್ತೆ, ತರೀಕೆರೆ, ಜೂ. 27 ಅಂಗವಿಕಲರು ಸರ್ಕಾರ ನೀಡುವ ಸೌಲಭ್ಯ ಪರಿಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು ತರೀಕೆರೆ ಉಪವಿಭಾಗಾಧಿಕಾರಿ ಅನುರಾಧ ಹೇಳಿದರು.
ಅವರು ಗುರುವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅರೋಗ್ಯ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಅಂಗವಿಕಲರ ಆರೋಗ್ಯ ತಪಾಸಣೆ ಹಾಗೂ ಸ್ಥಳದಲ್ಲಿಯೇ ಗುರುತಿನ ಚೀಟಿ ವಿತರಣಾ ಸಮಾರಂಭದ ಉದ್ಘಾಟಿಸಿ ಮಾತನಾಡಿದರು.
ಮಾಸಾಶನ: ವಿಕಲಚೇತನರಿಗೆ ಕಂದಾಯ ಇಲಾಖೆಯಿಂದ ಅವರ ವಿಕಲಚೇತನದ ಪ್ರಮಾಣ ಆಧರಿಸಿ ಮಾಶಾಸನ ನೀಡಲಾಗುತ್ತಿದೆ. ಮಾಶಾಸನಕ್ಕೆ ಅರ್ಹರಾದವರು ಯಾವುದಾದರೂ ಕಾರಣದಿಂದ ಸೌಲಭ್ಯ ವಂಚಿತರಾದರೆ, ಕೂಡಲೇ ತಮ್ಮನ್ನು ಖುದ್ದು ಭೇಟಿ ಮಾಡುವಂತೆ ತಿಳಿಸಿದ ಅವರು, ಪ್ರತಿ ತಿಂಗಳು ಹೋಬಳಿ ಕೇಂದ್ರಗಳಲ್ಲಿ ಪಿಂಚಣಿ ಆದಾಲತ್ ನಡೆಸುವ ಮೂಲಕ ಸರ್ಕಾರದಿಂದ ದೊರೆಯುವ ವಿವಿಧ
ಮಾಶಾಸನಗಳ ಆದೇಶದ ಪ್ರತಿಯನ್ನು ಸ್ಥಳದಲ್ಲಿಯೇ ದೊರಕಿಸಿಕೊಡಲಾಗುವುದು ಎಂದು ತಿಳಿಸಿದರು.
ಗ್ರಾಪಂ ಮಟ್ಟದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗೋಪಾಲಕೃಷ್ಣ ಮಾತನಾಡಿ, ವಿಕಲಚೇತನರಿಗೆ ಅರೋಗ್ಯ ತಪಾಸಣೆ, ಸ್ಥಳದಲ್ಲಿಯೇ ಗುರುತಿನ ಟೀಟಿ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ಯೋಜನೆಯನ್ನು ಪ್ರತಿ ಗ್ರಾಪಂ ಮಟ್ಟದಲ್ಲೂ ಕಾರ್ಯಗತಗೊಳಿಸಲಾಗುವುದು ಎಂದರು.
ಅಧಿಕಾರಿಗಳ ನೇಮಕ: ಇದಕ್ಕಾಗಿ ಜಿಲ್ಲೆ, ತಾಲೂಕು, ಹೋಬಳಿ ಮತ್ತು ಗ್ರಾಪಂ ಮಟ್ಟದಲ್ಲೂ ಅಧಿಕಾರಿಗಳನ್ನು ನೇಮಿಸಲಾಗುತ್ತಿದ್ದು, ಅವರ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರನ್ನು ಗುರುತಿಸಿ ಪಟ್ಟಿ ಮಾಡಿ ಸೌಲಭ್ಯ ಕೊಡಿಸಿಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದ ಅವರು ತರೀಕೆರೆ ತಾಲೂಕಿನಲ್ಲಿ ಈಗಾಗಲೇ 4,000 ವಿಕಲಚೇತರನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದರು.
ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಕಾಶ್ ಮಾತನಾಡಿ, ಚಿಕ್ಕಮಗಳೂರು ಮತ್ತು ಕಡೂರುಗಳಲ್ಲಿ ವಿಕಲಚೇತನರ ಪುನರ್ವಸತಿ ಕೇಂದ್ರಗಳನ್ನು ಸರ್ಕಾರ ತೆರೆದಿದ್ದು, ಇಲ್ಲಿ ಸಕಲ ಸೌಲಭ್ಯಗಳನ್ನು ವಿಕಲಚೇತನರಿಗೆ ನೀಡಲಾಗುವುದು ಎಂದು ತಿಳಿಸಿದರು.
ಮಾಜಿ ಪುರಸಭಾಧ್ಯಕ್ಷೆ ಹೇಮಲತಾ ರೇವಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಿಡಿಪಿಒ ಶ್ರೀಧರ್, ಡಾ. ಮಲ್ಲಿಕಾರ್ಜುನಪ್ಪ, ಶಶಿಧರ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

