ಹಕ್ಕು ಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜೂ.28
ತಾಲೂಕಿನ ಇಂದಾವರ ಗ್ರಾಮದ ಬಗರ್ ಹುಕುಂ ಸಾಗುವಳಿದಾರರಾದ ದಲಿತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ದಲಿತ ಬಗರ್ಹುಕು ಸಾಗುವಳಿದಾರರ ಹೋರಾಟ ಸಮಿತಿ ನೇತೃತ್ವದಲ್ಲಿ ದಲಿತರು ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಟಿ. ರಾಧಾಕೃಷ್ಣ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇಂದಾವರ ಗ್ರಾಮದ ದಲಿತರು, ಭೂ ಹೀನ ಬಡವರಾಗಿದ್ದು, ಕಳೆದ 25-30 ವರ್ಷಗಳಿಂದ ಇಂದಾವರ ಸರ್ವೇ ನಂಬರ್ 32 ಮತ್ತು 33 ರಲ್ಲಿ ತಲಾ 2-3 ಎಕರೆ ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ಭೂಮಿಯೇ ಅವರಿಗೆ ಜೀವನಾಧಾರವಾಗಿದೆ. ಸದರಿ ಭೂಮಿಗೆ ಹಕ್ಕುಪತ್ರ ನೀಡುವಂತೆ ಕಂದಾಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಈ ಕೆಲಸ ಈವರೆಗೆ ಆಗಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಹಕ್ಕು ಪತ್ರ ನೀಡಿ: ಸದರಿ ಸರ್ವೇ ನಂಬರ್ನಲ್ಲಿ ರಾಜಕೀಯ ಪ್ರಭಾವಿತರಿಗೆ, ಶ್ರೀಮಂತರಿಗೆ, ಬೇರೆಡೆ ಜಮೀನು ಹೊಂದಿದವರಿಗೆ ಸಾಗುವಳಿ ಚೀಟಿಯನ್ನು ನೀಡಲಾಗಿದೆ. ಆದರೆ, ಭೂ ಹೀನರಾದ ತಮಗೆ ಈವರೆಗೆ ಸಾಗುವಳಿ ಚೀಟಿಯನ್ನು ನೀಡಿಲ್ಲ. ಈ ಸಂಬಂಧ ಈಗಾಗಲೇ ಫಾರಂ 50 ಮತ್ತು 53ರಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಗಳನ್ನು ಪರಿಗಣಿಸಿ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಎಸ್ಪಿಯ ಮುಖಂಡರಾದ ಬಸವರಾಜ್, ಹೋರಾಟ ಸಮಿತಿಯ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ಐ.ಕೆ. ಕುಮಾರ್, ಖಜಾಂಚಿ ಯೋಗೀಶ್ ಹಾಗೂ ಇಂದಾವರ ಗ್ರಾಮದ ದಲಿತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

