ಅಕ್ರಮ ಮರಳು: ಕ್ರಿಮಿನಲ್ ಮೊಕದ್ದಮೆಗೆ ಒತ್ತಾಯ
ಕ.ಪ್ರ.ವಾರ್ತೆ, ಮೂಡಿಗೆರೆ, ಜೂ.29
ಹೇಮಾವತಿ ನದಿಯ ಆಸುಪಾಸಿನಲ್ಲಿ ಅಕ್ರಮ ಮರಳು ಸಂಗ್ರಹಿಸಿರುವ ದಂಧೆಕೋರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪ ಗೌಡ ಮತ್ತು ಸಿಪಿಐನ ಹಿರಿಯ ಮುಖಂಡ ಬಿ.ಕೆ. ಲಕ್ಷ್ಮಣ್ ಕುಮಾರ್ ಹೇಳಿದ್ದಾರೆ.
ಅವರು ಶನಿವಾರ ಈ ಬಗ್ಗೆ ಹೇಳಿಕೆ ನೀಡಿದ್ದು, ಮರಳು ದಂಧೆ ನಿಯಂತ್ರಣಕ್ಕೆ ಈ ಹಿಂದೆಯೇ ಕಠಿಣ ಕ್ರಮ ಜರುಗಿಸಿದ್ದರೆ ಸರ್ಕಾಕ್ಕೆ ಸಾಕಷ್ಟು ಆದಾಯವಾಗುತ್ತಿತ್ತು. ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟದಿಂದ ಹಳ್ಳಿಗಳ ಬಡ ರೈತರ ಭೂಮಿ ಸಹಿತ ರಸ್ತೆಗಳು ಹದಗೆಟ್ಟಿವೆ. ಸದ್ಯ ಮರಳು ದಂಧೆ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆ ಕುರಿತು ಜನರಿಗೆ ನೆಮ್ಮದಿಯಿದೆ. ಪ್ರಸಕ್ತ ಅವಧಿಯಲ್ಲಿನ ದಂಧೆಕೋರರ ರಾಜಕೀಯ ಕಸರತ್ತಿಗೆ ಮಣಿದು ಕಾರ್ಯಾಚರಣೆ ಸ್ಥಗಿತಗೊಳಿಸಬಾರದು. ಎಲ್ಲೆಡೆ ಅಕ್ರಮ ಮರಳು ಸಂಗ್ರಹವನ್ನು ಪತ್ತೆ ಹಚ್ಚಿ ಸಂಪೂರ್ಣ ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಮುಟ್ಟುಗೋಲು ಹಾಕುತ್ತಿರುವ ಮರಳನ್ನು ತಕ್ಷಣ ಮರಳು ಡಿಪೋಕ್ಕೆ ಸಾಗಿಸಿ ಮರಳು ಬೇಕಾದವರಿಗೆ ಅಲ್ಲಿಂದಲೇ ಮರಳು ಖರೀದಿಸುವಂತೆ ಮಾಡಬೇಕು. ಮರಳು ದಂಧೆಕೋರರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ತಹಸೀಲ್ದಾರ್ ರುದ್ರಪ್ಪಾಜಿ ರಾವ್ರನ್ನು ವರ್ಗಾಯಿಸಿ ದಂಧೆಕೋರರಿಗೆ ಸಹಕರಿಸಬಾರದು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

