ಆರೋಗ್ಯಕರ ಜೀವನಕ್ಕೆ ಜಾಗೃತಿ ಅಗತ್ಯ
ತರೀಕೆರೆ: ಆರೋಗ್ಯಕರ ಜೀವನ ನೆಡೆಸಲು ಜಾಗೃತಿ ಮೂಡಬೇಕು ಎಂದು ತರೀಕೆರೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹಿದಾಯತ್ ಉಲ್ಲಾ ಷರೀಫ್ ತಿಳಿಸಿದ್ದಾರೆ.
ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಮೀಪದ ಯಲುಗೆರೆ ಗ್ರಾಮದ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಡೆಂಘೀ ಜಾಗೃತಿ ಅಭಿಯಾನ, ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ನೆರವೇರಿಸಿ ಮಾತನಾಡಿ, ರಾಜ್ಯದಲ್ಲಿ ಡೆಂಘೀ ಮಹಾಮಾರಿಯಾಗಿ ಹರಡುತ್ತಿದೆ, ಜ್ವರ ಬಂದರೆ ತಕ್ಷಣ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಕಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಬಿ. ಜಯಲಕ್ಷ್ಮಿ ಮಾತನಾಡಿ, ನೀರು ನಿಲ್ಲದಂತೆ ನೋಡಿಕೊಳ್ಳಿ, ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳಿ, ಮಕ್ಕಳ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಅವರು ತಿಳಿಸಿದರು.
300 ಶಂಕಿತ ಡೆಂಘೀ: ಸಾರ್ವಜನಿಕ ಆಸ್ಪತ್ರೆ ವೈದ್ಯ ಡಾ. ಪ್ರಸನ್ನಕುಮಾರ್ ಸಣ್ಣಕ್ಕಿ ಮಾತನಾಡಿ, ಜನಸಂಪರ್ಕ ಮಾಡಿ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು. ನೀರು ಸಂಗ್ರಹಿಸುವ ತೊಟ್ಟಿಯನ್ನು ಶುಭ್ರವಾಗಿ ತೊಳೆಯಬೇಕು. ತಾಲೂಕಿನಲ್ಲಿ 300 ಶಂಕಿತ ಡೆಂಘೀ ಕಂಡು ಬಂದಿತ್ತು ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಶಿವಪ್ರಸಾದ್ ಮಾತನಾಡಿ, ಅರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಮುಂಜಾಗ್ರತೆ ವಹಿಸಿ ರೋಗ ತಡೆಗಟ್ಟಬೇಕು ಎಂದು ತಿಳಿಸಿದರು.
ಗ್ರಾಪಂ ಸದಸ್ಯ ಜಗದೀಶ್ ನಾಯಕ್, ಸಂಪನ್ಮೂಲ ವ್ಯಕ್ತಿ ರುದ್ರೇಗೌಡ, ವಕೀಲ ಸುರೇಶ್ ಚಂದ್ರ, ರೇವಣಸಿದ್ದಪ್ಪ ಮಾತನಾಡಿದರು. ಗ್ರಾಪಂ ಸದಸ್ಯರು, ಶಾಲೆ ಮುಖ್ಯೋಪಾಧ್ಯಾಯರು, ವಕೀಲ ತೇಜಮೂರ್ತಿ, ಡಾ. ಪ್ರವೀಣ್, ಡಾ. ದೀಪಕ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

