ಕೌಶಲ್ಯ ಅಭಿವೃದ್ಧಿ ಕೇಂದ್ರ ಪ್ರಾರಂಭಿಸಲು ಮೀನಮೇಷ: ಶಾಸಕ ಜೀವರಾಜ್
ನರಸಿಂಹರಾಜಪುರ: ಶೃಂಗೇರಿ ಕ್ಷೇತ್ರದ ನರಸಿಂಹರಾಜಪುರಕ್ಕೆ ಈ ಹಿಂದೆ ಯುವ ಜನರಿಗೆ ಅನುಕೂಲವಾಗಲಿ ಎಂದು ಸ್ವಯಂ ಉದ್ಯೋಗ ಸೃಷ್ಟಿಸುವ ಕೌಶಲ್ಯ ಅಭಿವೃದ್ಧಿ ಕೇಂದ್ರ ಮಂಜೂರು ಮಾಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೌಶಲ್ಯ ಅಭಿವೃದ್ಧಿ ಕೇಂದ್ರ ಪ್ರಾರಂಭಿಸಲು ಹಿಂದೆ ಮುಂದೆ ನೋಡುತ್ತಿದೆ ಎಂದು ಶಾಸಕ ಡಿ.ಎನ್. ಜೀವರಾಜ್ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ 100 ಕೇಂದ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಮಂಜೂರು ಮಾಡಿತ್ತು. ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಸೇರಿದೆ ಎಂದರು.
ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಗಾರೆ, ಕೊಳಾಯಿ, ಬಾರ್ ಬೆಂಡಿಂಗ್ ಸೇರಿದಂತೆ ವಿವಿಧ 9 ತರಬೇತಿಗಳನ್ನು ಕೌಶಲ್ಯ ಅಭಿವೃದ್ದಿ ಕೇಂದ್ರಗಳಲ್ಲಿ ಕಲಿಸಲಾಗುತ್ತದೆ. ಚುನಾವಣಾ ನೀತಿ ಸಂಹಿತೆ ಬಂದಿದ್ದರಿಂದ ಮಂಜೂರಾತಿಯಾಗಿದ್ದರೂ ಕಾರ್ಯಕ್ರಮ ಜಾರಿ ಮಾಡಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸದೆ ಇರುವರಿಂದ ನೋವು ಉಂಟಾಗಿದೆ ಎಂದರು.
ಕೊಪ್ಪ ತಾಲೂಕಿಗೆ ಅಟಲ್ ಬಿಹಾರಿ ವಸತಿ ಶಾಲೆಯು ಹುದ್ದೆಯೊಂದಿಗೆ ಮಂಜೂರಾಗಿತ್ತು. ಹಣವೂ ಬಿಡುಗಡೆಯಾಗಿತ್ತು. ಆದರೆ ಪ್ರವೇಶ ಶುರು ಮಾಡಲೇ ಇಲ್ಲ. ಕೊಪ್ಪದಲ್ಲಿ ಥೋಮರ್ ಶೆಟ್ಟಿ ಶಾಲೆ ಖಾಲಿ ಇದ್ದು, ಅಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮಾಡಲು ಸಿದ್ಧತೆ ನಡೆಸಲಾಗಿತ್ತು.
ಆ ಶಾಲೆಯನ್ನು ಬಿಟ್ಟುಕೊಡಲು ಒಪ್ಪಿಗೆ ನೀಡಿದ್ದರು. ಮುಂದಿನ ದಿನಗಳಲ್ಲಿ ಕುದುರೆಗುಂಡಿ ಸಮೀಪದಲ್ಲಿ 8 ಎಕರೆ ಜಾಗದಲ್ಲಿ ವಾಜಪೇಯಿ ವಸತಿ ಶಾಲೆ ನಿರ್ಮಿಸಲು ಯೋಜನೆಯೂ ರೂಪಿಸಲಾಗಿತ್ತು. ಶೃಂಗೇರಿ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಶಾಲೆ ಮಂಜೂರಾಗಿತ್ತು. ಬೋಧಕರನ್ನು ನೇಮಿಸಲೂ ಸಿದ್ಧತೆ ನಡೆಸಲಾಗಿತ್ತು. ಆದರೆ ಕಾಂಗ್ರೆಸ್ ಅಸಹಕಾರದಿಂದ ನಿಲ್ಲುತ್ತಿದೆ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಿಜೆಪಿಗೆ ಕರೆ ತರುವ ಪ್ರಯತ್ನದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಲು ಡಿ.ಎನ್. ಜೀವರಾಜ್ ನಿರಾಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

