ಮಣ್ಣು ಪರೀಕ್ಷೆ, ಗೊಬ್ಬರದಿಂದ ಉತ್ತಮ ಫಸಲು'
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಜೂ.29
ಕಾಫಿ ಬೆಳೆಗಾರರು ತಮ್ಮ ತೋಟದ ಮಣ್ಣು ಪರೀಕ್ಷಿಸುವುದರ ಜೊತೆಗೆ ಕಾಲ ಕಾಲಕ್ಕೆ ಗುಣಮಟ್ಟದ ಗೊಬ್ಬರ ಹಾಕಿ, ಹೆಚ್ಚಿನ ಕಾಳಜಿ ವಹಿಸಿದರೆ ಉತ್ತಮ ಫಸಲು ಪಡೆಯಲು ಸಾಧ್ಯ ಎಂದು ಜಂಟಿ ಕೃಷಿ ನಿರ್ದೇಶಕ ಎಂ. ರಾಜು ಹೇಳಿದ್ದಾರೆ.
ಚಿಕ್ಕಮಗಳೂರು ಕ್ಲಬ್ನಲ್ಲಿ ಗ್ರೀನ್ ಸ್ಟಾರ್ ಫರ್ಟಿಲೈಜರ್ ಲಿ., ಕೃಷಿ ಇಲಾಖೆ, ಕೇಂದ್ರೀಯ ಕಾಫಿ ಸಂಶೋದನಾ ಸಂಸ್ಥೆ ಮತ್ತು ತೋಟಗಾರಿಕಾ ಇಲಾಖೆಗಳು ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀನ್ ಸ್ಟಾರ್ ಫರ್ಟಿಲೈಜರ್ ಲಿ., ರಾಜ್ಯ ಮಾರಾಟ ವ್ಯವಸ್ಥಾಪಕ ಸಿ.ಎಸ್. ಮುರಳೀಧರ್ ಮಾತನಾಡಿ, ಸರ್ಕಾರ ರಸಗೊಬ್ಬರ ಉತ್ಪಾದನೆಗೆ ಹೆಚ್ಚಿನ ಸಹಕಾರ ನೀಡಬೇಕು. ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಸಬ್ಸಿಡಿ ದರದಲ್ಲಿ ರಸಗೊಬ್ಬರ ದೊರೆತರೆ ಸಂಕಷ್ಟಕ್ಕೆ ನೆರವಾದಂತಾಗುತ್ತದೆ ಎಂದರು.
ಕೇಂದ್ರೀಯ ಕಾಫಿ ಸಂಶೋಧನಾ ಕೇಂದ್ರದ ಮಣ್ಣು ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಮರಿಯಾ ವಾಯೊಲೆಟ್ ಡಿಸೋಜಮಾತನಾಡಿದರು. ತ್ಯಾಗರಾಜನ್, ಎಸ್. ಭಾಸ್ಕರನ್, ಪ್ರಾದೇಶಿಕ ವ್ಯವಸ್ಥಾಪಕರಾದ ಎಸ್. ಗಡಚಿ, ಡಾ. ಸುಧಾಕರ್, ಡಾ. ಬಾಲಕೃಷ್ಣ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

