ಚಿಕ್ಕಮಗಳೂರು

ಸಮಾಜ ಸೇವೆ ರೋಟರಿ ಸಂಸ್ಥೆಯ ಮುಖ್ಯ ಉದ್ದೇಶ

Published On :

ಬಾಳೆಹೊನ್ನೂರು: ಸಮಾಜ ಸೇವೆಯೇ ರೋಟರಿ ಸಂಸ್ಥೆಯ ಮುಖ್ಯ ಉದ್ದೇಶ ಎಂದು ರೋಟರಿ ವಲಯ 10ರ ಉಪ ರಾಜ್ಯಪಾಲ ಜಿ.ಸಿ. ಶರತ್ ಹೇಳಿದ್ದಾರೆ.
ಇಲ್ಲಿಗೆ ಸಮೀಪದ ಜಯಪುರದ ರೋಟರಿ ಸಂಸ್ಥೆ ಲೋಕನಾಥಪುರದ ಭೂ ಅಭಿವೃದ್ಧಿ ಬ್ಯಾಂಕ್‌ನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಂಘ ಸಂಸ್ಥೆಗಳು ನಿಂತ ನೀರಾಗದೇ ನಿರಂತರ ಕ್ರಿಯಾಶೀಲತೆಯಿಂದಿರಬೇಕು. ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು. ರೋಟರಿ ಸಂಸ್ಥೆಯ ನೂತನ ಅಧ್ಯಕ್ಷ ಹುಮಾಯೂನ್ ಕಬೀರ್ ಅವರಿಗೆ ಸೂರ್ಯಪ್ರಕಾಶ್ ಭಟ್ ಪದವಿ ಪ್ರದಾನ ಮಾಡಿದರು. ವಲಯಾಧಿಕಾರಿ ಎಚ್.ಸಿ. ಮೋಹನ್, ಮೂಡಬಿದಿರೆಯ ಮಹಮ್ಮದ್ ಆಲಿ ಅಬ್ಬಾಸ್, ಜಯಪುರ ಗ್ರಾ.ಪಂ.ಅಧ್ಯಕ್ಷೆ ಕವಿತಾ ಶ್ರೀನಿವಾಸ್, ಕೆ.ಆರ್. ಶ್ರೀಕರ, ರಾಮಲಿಂಗಂ, ಎಚ್.ಎಂ. ಸತೀಶ್, ಕೆ.ಆರ್. ವೇಣುಗೋಪಾಲ್, ಡಿ.ಎನ್. ಕೇಶವಮೂರ್ತಿ, ಜೆ.ಆರ್. ನಾಗಭೂಷಣ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.