ಚಿಕ್ಕಮಗಳೂರು

ಮಾಜಿ ಸೈನಿಕರಿಗೆ ಸೂಚನೆ

Published On :

ಚಿಕ್ಕಮಗಳೂರು: 2006 ಜನವರಿ 1 ಕ್ಕಿಂತ ಮೊದಲು ಸೈನ್ಯ ಸೇವೆಯಿಂದ ಬಿಡುಗಡೆ ಹೊಂದಿದ ಮಾಜಿ ಸೈನಿಕರು ಹಾಗೂ ಮಾಜಿ ಸೈನಿಕರ ಅವಲಂಬಿತರು ಪಡೆಯುತ್ತಿರುವ ಪಿಂಚಣಿಯು ಸರಿಯಾಗಿ ಪರಿಷ್ಕರಣೆಯಾಗದೇ ಇದ್ದಲ್ಲಿ ಅಥವಾ ನ್ಯೂನತೆಗಳಿದ್ದಲ್ಲಿ ಅಂಥವರು ತಮ್ಮ ಮೂಲ ಡಿಸ್ ಚಾರ್ಜ್ ಪುಸ್ತಕ, ಪಿಂಚಣಿ ಪುಸ್ತಕ, ಬ್ಯಾಂಕ್ ಪುಸ್ತಕ ಇತ್ಯಾದಿಗಳೊಂದಿಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಹಾಸನ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪ್ರವೇಶ ಪರೀಕ್ಷೆ
ಉತ್ತರಖಾಂಡದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಯ ಮೂಲಕ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ರಾಜ್ಯದ ಬಾಲಕರಿಗೆ ಪ್ರವೇಶ ಪರೀಕ್ಷೆಯು 2013 ಡಿಸೆಂಬರ್ 1 ಹಾಗೂ 2 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ 2001 ಜುಲೈ 2 ರಿಂದ 2003 ಜನವರಿ 1 ರೊಳಗೆ ಜನಿಸಿರುವ ಬಾಲಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ವರ್ಲ್ಷಲ್ ಕೆ.ಎಂ. ಕಾರ್ಯಪ್ಪ ಭವನ, ಫೀಲ್ಡ್ ವರ್ಲ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಜಲನೇತಿ ಶಿಬಿರ
ಶಿವಮೊಗ್ಗ: ಜಿಲ್ಲಾಡಳಿತ, ಜಿಪಂ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕಣಾದ ಯೋಗ ಮತ್ತು ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ಜುಲೈ 1ರಿಂದ 3ರವರೆಗೆ ನಗರದಲ್ಲಿ ನೆಹರೂ ಕ್ರೀಡಾಂಗಣದ ಲ್ಲಿ ಶೀತ, ತಲೆನೋವು ನಿವಾರಣೆಗೆ ಜಲನೇತಿ ಶಿಬಿರ ಏರ್ಪಡಿಸಲಾಗಿದೆ. ಮಾಹಿತಿಗೆ- 9886674375

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.