ಶಾಲಾ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ
ಚಿಕ್ಕಮಗಳೂರು: ಶಾಲಾ ಮಕ್ಕಳಿಗೆ ವಿವಿಧ ಇಲಾಖೆಗಳಿಂದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಹೇಳಿದ್ದಾರೆ.
ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ಮಕ್ಕಳ ಹಬ್ಬ- 2013 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಟ್ಟುಗೂಡಿಸಿ ನಡೆಸುತ್ತಿರುವುದು ಉತ್ತಮ ಕಾರ್ಯ. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಿಂದ ಮಕ್ಕಳ ಪ್ರತಿಭೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹೊರಬರುವಂತಾಗಿದೆ ಎಂದರು.
ಜಿಲ್ಲಾಧಿಕಾರಿ ಯಶವಂತ್ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕಾಂತರಾಜು, ಡಿವೈಎಸ್ಪಿ ಎಸ್.ಎಲ್. ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಬಸವರಾಜು ಇದ್ದರು.
ಇಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು: ಆಲ್ದೂರು- ಬಾಳೆಹೊನ್ನೂರು 66 ಕೆ.ವಿ. ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ 2 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಬಾಳೆಹೊನ್ನೂರು ಮತ್ತು ಆಲ್ದೂರು ಹಾಗೂ ಕೊಪ್ಪ, ಶೃಂಗೇರಿ, ಕಳಸ ಮತ್ತು ಜಯಪುರ ವಿ.ವಿ. ಕೇಂದ್ರದ ನಗರ, ಗ್ರಾಮೀಣ ಫೀಡರ್ಗಳಿಂದ ಹೊರಹೊಮ್ಮುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

