4ರಂದು ಖಾಸಗಿ ವಿವಿ ವಿರೋಧಿಸಿ ಪ್ರತಿಭಟನೆ
ಚಿಕ್ಕಮಗಳೂರು: ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಬಿವಿಪಿ ಮಾ.4ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಅಂದು ರಾಜ್ಯದ 150 ಕೇಂದ್ರಗಳಲ್ಲಿ ಧರಣಿ, ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಕೆ. ರಮೇಶ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ 22 ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಅನುಮತಿ ನೀಡಲಾಗಿದೆ. ಈ ಪೈಕಿ 18 ವಿವಿಗಳು ಬೆಂಗಳೂರು ಕೇಂದ್ರೀಕೃತವಾಗಿವೆ. ಒಂದೇ ಕಡೆಯಲ್ಲಿ ಇಷ್ಟೊಂದು ವಿವಿಗಳಿಗೆ ಅನುಮತಿ ನೀಡಿರುವುದು ಸರಿಯಲ್ಲ. ಇದಕ್ಕೆ ಅನುಸರಿಸಿದ ಮಾರ್ಗಸೂಚಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಕಳೆದ ಅಧಿವೇಶನದಲ್ಲಿ ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಮಂಜೂರಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಅನುಮತಿ ನೀಡಿರುವ ಖಾಸಗಿ ವಿವಿಗಳಿಂದ ಕೋಟ್ಯಂತರ ರುಪಾಯಿಗಳ ಭ್ರಷ್ಟಚಾರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿರುವುದರಿಂದ ರಾಜ್ಯಪಾಲರು ಯಾವುದೇ ಕಾರಣಕ್ಕೂ ಇಂತಹ ಖಾಸಗಿ ವಿವಿಗಳಿಗೆ ಅನುಮತಿ ನೀಡಲು ಅಂಕಿತ ಹಾಕಬಾರದು ಎಂದು ಒತ್ತಾಯಿಸಿದರು ಎಂದರು.
ಗೋಷ್ಠಿಯಲ್ಲಿ ಎಬಿವಿಪಿ ಮುಖಂಡರಾದ ಸಂತೋಷ್ ಕೋಟ್ಯಾನ್, ದಯಾನಂದ್ ತಿರುಗುಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

