ಅಭಿವೃದ್ಧಿಗಾಗಿ ಜನತೆ ಬಿಜೆಪಿಗೆ ಮತನೀಡಿ: ಮನವಿ
ಕನ್ನಡಪ್ರಭ ವಾರ್ತೆ ಶೃಂಗೇರಿ ಮಾ.2
ಬಿಜೆಪಿ ಕಳೆದ ಐದು ವರ್ಷಗಳು ಪಪಂ ಆಡಳಿತಾವಧಿಯಲ್ಲಿ ಸ್ವಚ್ಛ ಪ್ರಾಮಾಣಿಕ, ಜನಪರ ಅಭಿವೃದ್ಧಿ ನಡೆಸಿದೆ. ಅಭಿವೃದ್ಧಿಗಾಗಿ ಜನತೆ ಬಿಜೆಪಿಯನ್ನು ಮತ್ತೆ ಬೆಂಬಲಿಸಬೇಕು ಎಂದು ಬಿಜೆಪಿ ತಾ. ಘಟಕದ ಅಧ್ಯಕ್ಷ ಎ.ಎಸ್. ನಯನ ತಿಳಿಸಿದರು.
ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಟ್ಟಣದ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಮುಖ್ಯ ರಸ್ತೆಯ ಕಟ್ಟಡಗಳನ್ನು ಒಡೆಯುವುದೊಂದೇ ಪರಿಹಾರವಲ್ಲ. ಅದನ್ನು ತಪ್ಪಿಸುವ ಸಲುವಾಗಿ 10 ಕೋಟಿ ವೆಚ್ಚದಲ್ಲಿ ಪ್ಯಾರಲಾಲ್ ರಸ್ತೆ ನಿರ್ಮಿಸಲಾಗುತ್ತಿದೆ. ಬದಲಿ ವ್ಯವಸ್ಥೆಗೆ ಅಗತ್ಯವಿರುವ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಲಾಗುವುದು ಎಂದರು.
ಎಲ್ಲಾ 11 ವಾರ್ಡಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾದಿಸಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ತರುವಲ್ಲಿ ಪಟ್ಟಣದ ಜನತೆ ತಮ್ಮ ಆರ್ಶಿವದಿಸಲಿದ್ದಾರೆ ಎಂದರು.
ಟಿ.ಕೆ. ಪರಾಶರ, ಬಿ.ಎನ್. ಕೃಷ್ಣ, ಮಂಜುನಾಥ್ ಪಂಡಿತ್,ಚೇತನ್ ಹೆಗ್ಡೆ, ಹರೀಶ್ ಶೆಟ್ಟಿ, ಶ್ರೀಧರ್, ಎಲ್ಲಾ ವಾರ್ಡ್ಗಳ ಅಭ್ಯರ್ಥಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

