ಚಿಕ್ಕಮಗಳೂರು

ಅಭಿವೃದ್ಧಿಯೇ ಬಿಜೆಪಿಗೆ ಶ್ರೀರಕ್ಷೆ

Published On :

ಕ.ಪ್ರ.ವಾರ್ತೆ, ಕಡೂರು, ಮಾ.2  ಕಡೂರು ಹಾಗು ಬೀರೂರಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪರವಾಗಿ ಶಾಸಕ ಡಾ ವೈ.ಸಿ. ವಿಶ್ವನಾಥ್ ಅವರು ಪಟ್ಟಣದ ವಾರ್ಡುಗಳಲ್ಲಿ ಮತಯಾಚನೆ ನಡೆಸಿದರು.                 
ಪಟ್ಟಣದ ಲಕ್ಷ್ಮೀಶ ನಗರದ 10ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಮೀನಾ ಪ್ರಸನ್ನರವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಅಭಿವೃದ್ಧಿಗೆ ಆದ್ಯತೆ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡೂರು ಪಟ್ಟಣದ ಸಮಗ್ರ ಅಭಿವೃದ್ದಿಗೆ ಬಿಜೆಪಿ ಸರ್ಕಾರದಿಂದ ಕೋಟ್ಯಂತರ ರು. ಅನುದಾನ ತರುವ ಮೂಲಕ ಕಡೂರು ಹಾಗು ಬೀರೂರು ಪಟ್ಟಣದ ರಸ್ತೆಗಳ ಅಭಿವೃದ್ದಿ, ಚರಂಡಿಗಳು, ವಿದ್ಯುತ್ ಸೇರಿದಂತೆ ಮೂಲಭೂತ ಸವಲತ್ತುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಬಿಜೆಪಿ ಸರ್ಕಾರವು ರಾಜ್ಯದ ಜನರ ಪರವಾಗಿ ರೂಪಿಸಿದ ಜನಪರ ಯೋಜನೆಗಳಾದ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ, ಸೈಕಲ್ ವಿತರಣೆ, ಸಂಧ್ಯಾಸುರಕ್ಷಾ, ಅಂಗವಿಕಲ ವೇತನ,ರೈತರಿಗೆ ಶೂನ್ಯ ಬಡ್ಡಿಯಲ್ಲಿ ದರದಲ್ಲಿ ಸಾಲ ವಿತರಣೆ ಸೇರಿದಂತೆ ಜನ ಸಾಮಾನ್ಯರ ಪರವಾಗಿ ರೂಪಿಸಿದ ಕಾರ್ಯಕ್ರಮಗಳು ಈ ಭಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಸ್ಥಳೀಯ ಸಂಸ್ಥೆಗಳಲ್ಲಿ ಗೆಲುವು ಸಾಧಿಸಲು ಕಾರಣವಾಗಲಿದೆ ಎಂದು ಅವರು ತಿಳಿಸಿದರು.
ಬಿಜೆಪಿ ಬೆಂಬಲಿಸಿ: ಬಿಜೆಪಿ ಸರ್ಕಾರದಿಂದ ಭದ್ರಾ ನದಿಯಿಂದ ಕಡೂರು ಮತ್ತು ಬೀರೂರು ಪಟ್ಟಣಕ್ಕೆ ಶಾಶ್ವತ ಶುದ್ದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಚುರುಕುಗೊಳಿಸುವ ಮೂಲಕ ಅವಳಿ ಪಟ್ಟಣಗಳಿಗೆ ಶಾಶ್ವತ ಕುಡಿಯುವ ನೀರು ದೊರಕಲಿರುವುದು ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಎರಡೂ ಪುರಸಭೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಸಹಕಾರಿಯಾಗಲಿದೆ ಎಂದರು.                                                       
ಕಡೂರು ಹಾಗು ಬೀರೂರು ಪಟ್ಟಣಗಳಲ್ಲಿ ಪ್ರಣಾಳಿಕೆಯಂತೆ ದಿನದ 24 ಗಂಟೆ ನೀರು ಪೂರೈಕೆ, ಜನರ ಆಸ್ತಿಗಳು ದಾಖಲೆಗಳನ್ನು ಗಣಕೀಕರಣ ಮಾಡುವುದು ಸೇರಿದಂತೆ ಪಟ್ಟಣಗಳ ಸರ್ವಾಂಗೀಣ ಅಭಿವೃದ್ದಿಗೆ ಬಿಜೆಪಿ ಪಕ್ಷವು ಆದ್ಯತೆ ನೀಡುತ್ತದೆ. ಮತದಾರ ಪ್ರಭುಗಳು ಕಡೂರು ಹಾಗು ಬೀರೂರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಅಭ್ಯರ್ಥಿ ಮೀನಾ ಪ್ರಸನ್ನ, ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಹೆಚ್.ಎ.ಪ್ರಸ್ನನ್ನ, ಉಪಾಧ್ಯಕ್ಷ ಎ.ಮಣಿ,ಪಕ್ಷದ ವಕ್ತಾರ ಶಿವಶಂಕರ್, ಮುಖಂಡ ಶಶಿಧರ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.