ಚಿಕ್ಕಮಗಳೂರು

ಈ ಚುನಾವಣೆ ವಿಧಾನಸಭೆ ಚುನಾವಣೆಗೆ ಬುನಾದಿ: ರಂಜನ್

Published On :

ಮೂಡಿಗೆರೆ: ಪಟ್ಟಣ ಪಂಚಾಯಿತಿ ಚುನಾವಣೆ ಮುಂದಿನ ವಿಧಾನ ಸಭಾ ಚುನಾವಣೆಗೆ ಬುನಾದಿಯಾಗಲಿದೆ ಎಂದು ಕೆಜೆಪಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜನ್ ಅಜಿತ್‌ಕುಮಾರ್ ಹೇಳಿದರು.
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮತಯಾಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರೆಗೆ ಪಟ್ಟಣ ಪಂಚಾಯಿತಿಯಲ್ಲಿ ಆಡಳಿತ ನಡೆಸಿದ ಪಕ್ಷಗಳಿಂದ ಪಟ್ಟಣದ ಅಭಿವೃದ್ಧಿ ಸಾಧ್ಯವಾಗಿಲ್ಲ. ಆದ್ದರಿಂದ ಈ ಸಲದ ಚುನಾವಣೆಯಲ್ಲಿ ಅವರಿಗೆ ತಕ್ಕ ಶಾಸ್ತಿ ಮಾಡಲು ಮತದಾರರು ತುದಿಗಾಲಿನ ಮೇಲೆ ನಿಂತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಚುನಾವಣೆಯಲ್ಲಿ ಕೆಜೆಪಿಗೆ ಕಾಂಗ್ರೆಸ್ ಪೈಪೋಟಿ ಒಡ್ಡಲಿದೆ. ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ತಡೆದುಕೊಳ್ಳಲು ಸಜ್ಜಾಗಬೇಕಿದೆ. ಬಿಜೆಪಿಯಿಂದ ಸದೃಡ ಆಡಳಿತದ ಕನಸು ಹೊತ್ತು ಹಿಂದಿನ ಅನೇಕ ಚುನಾವಣೆಗಳಲ್ಲಿ ಮತದಾರರು ಆ ಪಕ್ಷವನ್ನು ಗೆಲ್ಲಿಸಿದ್ದಕ್ಕೆ ಶಪಿಸಿಕೊಳ್ಳುವಂತಾಗಿದೆ. ಮಾಜಿ ಸಿಎಂ ಯಡಿಯೂರಪ್ಪರ ಅಭಿವೃದ್ಧಿಪರ ನಿಲುವು ಪಟ್ಟಣ ಪಂಚಾಯಿತಿಗೆ ವರವಾಗಿ ಪರಿಣಮಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.