ಚಿಕ್ಕಮಗಳೂರು

ಜನಪರ ಆಡಳಿತಕ್ಕೆ ಕಾಂಗ್ರೆಸ್ ಬದ್ಧ

Published On :

ತರೀಕರೆ:  ಜನಪರವಾದ ಪಾರದರ್ಶಕ ಅಡಳಿತ ನೀಡಲು ಕಾಂಗ್ರೆಸ್ ಬದ್ದವಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್ ಮೂರ್ತಿ
ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತವಾದ, ಜನಪರವಾದ ಪಾರದರ್ಶಕವಾದ ಆಡಳಿತವನ್ನು ನೀಡಲು ಕಾಂಗ್ರೆಸ್ ಪಕ್ಷ ಬದ್ದವಾಗಿದೆ, ಪುರಸಭೆ ಸದಸ್ಯರ ಚುನಾವಣೆಗಾಗಿ ಪಟ್ಟಣದ 23 ವಾರ್ಡುಗಳ ಪೈಕಿ 21 ವಾರ್ಡುಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಲಾಗಿದೆ, ಪಕ್ಷೇತರರಾಗಿ ಪಕ್ಷದ ಕಾರ್ಯಕರ್ತರು ಸ್ಪರ್ಧಿಸಿದ್ದರೆ, ಕೂಡಲೇ ಅವರು ಕಣದಿಂದ ನಿವೃತ್ತರಾಗಬೇಕು, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತರೀಕೆರೆಯಲ್ಲಿ ಟಿಕೇಟು ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಅವರೆಲ್ಲರೂ ಒಗ್ಗಟ್ಟಾಗಿ ಪುರಸಬೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಶ್ರಮಿಸಬೇಕು ಎಂದರು.
ಮೂಲಭೂತ ಸೌಕರ್ಯ: ಸಂಸದ ಜಯಪ್ರಕಾಶ್ ಹೆಗಡೆ ಮಾತನಾಡಿ, ಕೇಂದ್ರ ಸರ್ಕಾರ ಮಂಡಿಸಿರುವ 2013-14ನೇ ಸಾಲಿನ ಆಯವ್ಯಯ ತೃಪ್ತಿ ತಂದಿದೆ, ಕೃಷಿಗೆ ಆದ್ಯತೆ ನೀಡಲಾಗಿದೆ, ಕಡೂರು-ಚಿಕ್ಕಮಗಳೂರು ರೈಲ್ವೆ ಕಾರ್ಯ ಪೂರ್ಣವಾಗಿ ಒಂದು ಹಂತವನ್ನು ತಲುಪಿದೆ, ತರೀಕೆರೆ ರೈಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲು ತಾವು ಎಲ್ಲ ರೀತಿಯಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್, ಕೆಪಿಸಿಸಿ ಸದಸ್ಯ ಟಿ.ವಿ.ಶಿವಶಂಕರಪ್ಪ,  ಮಾಜಿ ಶಾಸಕರಾದ ಎಸ್.ಎಂ.ನಾಗರಾಜ್, ಟಿ.ಎಚ್.ಶಿವಶಂಕರಪ್ಪ, ಜಿಲ್ಲಾ ಕಾಂಗ್ರೆಸ್
 ಉಪಾಧ್ಯಕ್ಷ ಜಿ.ಎಚ್.ಶ್ರೀನಿವಾಸ್, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಸಮೀಉಲ್ಲಾ,  ದೋರನಾಳ್ ಪರಮೇಶ್, ಪರಶುರಾಂ, ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.