ಚಿಕ್ಕಮಗಳೂರು

ತರೀಕೆರೆಯಲ್ಲಿ ಸ್ಕೌಟ್ಸ್ ಗೈಡ್ಸ್ ಉದ್ಘಾಟನೆ

Published On :

ಕ.ಪ್ರ.ವಾರ್ತೆ,  ತರೀಕೆರೆ, ಮಾರ್ಚ್.2:
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಉದ್ಘಾಟನಾ ಸಮಾರಂಭವನ್ನು
ಏರ್ಪಡಿಸಲಾಗಿತ್ತು.
ಚಿಕ್ಕಮಗಳೂರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ತರಬೇತುದಾರರಾದ ಸಂಧ್ಯಾರಾಣಿ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಥಮ ಬಾರಿಗೆ ಪದವಿ ಕಾಲೇಜಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ್ನು ಪ್ರಾರಂಭಿಸಲಾಗಿದೆ. ಯುವಶಕ್ತಿ ಸದುಪಯೋಗವಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಘಟಕ ಬಿ.ಎಂ. ಕಿರಣ್‌ಕುಮಾರ್ ಪ್ರಮಾಣ ವಚನ ಭೋದಿಸಿದರು. ಸಹಕಾರ್ಯದರ್ಶಿ ಹೊನ್ನೇಗೌಡರು, ಪ್ರಭಾರಿ ಪ್ರಾಚಾರ್ಯರಾದ ಗಂಗರಾಜ್, ದೈಹಿಕ ಶಿಕ್ಷಣ ನಿರ್ದೇಶಕರು, ಎಚ್.ಟಿ. ಜಯಕೀರ್ತಿ, ಶಿವಮೂರ್ತಿ, ಎಸ್. ಕುಮಾರ್ ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.