ಚಿಕ್ಕಮಗಳೂರು

ಕಡೂರು, ಬೀರೂರು ಅಭಿವೃದ್ಧಿ ಗುರಿ

Published On :

ಕನ್ನಡ ಪ್ರಭ ವಾರ್ತೆ, ಕಡೂರು, ಮಾ.3
ಕಡೂರು ಹಾಗೂ ಬೀರೂರು ಪಟ್ಟಣಗಳ ಸಮಗ್ರ ಅಭಿವೃದ್ದಿಯೇ ಬಿಜೆಪಿ ಪಕ್ಷದ ಪ್ರಮುಖ ಗುರಿಯಾಗಿದೆ ಎಂದು ಶಾಸಕ ಡಾ ವೈ.ಸಿ. ವಿಶ್ವನಾಥ್ ಹೇಳಿದರು.
ಅವರು ಕಡೂರು ಪಟ್ಟಣದಲ್ಲಿ ಪುರಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ವಾರ್ಡುಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಿಂದ ಕಡೂರು ಬೀರೂರು ಪುರಸಭೆಗಳಿಗೆ ತಲಾ 5 ಕೋಟಿ ಅನುದಾನ ಸೇರಿದಂತೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಕೂಡ ತಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬರಗಾಲದಿಂದಾಗಿ ಕುಡಿಯುವ ನೀರಿನ ತೊಂದರೆ ತೀವ್ರವಾದ ಹಿನ್ನೆಲೆಯಲ್ಲಿ ವಿಶೇಷ ಅನುದಾನದಲ್ಲಿ ಹೊಸದಾಗಿ ಕೊಳವೆಬಾವಿಗಳನ್ನು ಕೊರೆಸಿ ಕಡೂರು, ಬೀರೂರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಸ್ತೆಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಿ ರಸ್ತೆಗಳ ನಿರ್ಮಾಣಕ್ಕೆ ವಿಶೇಷ ಅದ್ಯತೆ ನೀಡಿ ಕಡೂರು, ಬೀರೂರು ಪಟ್ಟಣಗಳಲ್ಲಿ ರಸ್ತೆಗಳ ಡಾಂಬರೀಕರಣ ಸೇರಿದಂತೆ ಉತ್ತಮ ರಸ್ತೆಗಳ ನಿರ್ಮಾಣ ಮಾಡಲಾಗಿದೆ ಎಂದರು.
5.35 ಕೋಟಿ ಅನುದಾನ: ಕಡೂರು ಹಾಗು ಬೀರೂರು ಪುರಸಭೆಗಳಿಗೆ ನೀಡಿದ ತಲಾ 5.35 ಕೋಟಿ ಅನುದಾನದಲ್ಲಿ ರಸ್ತೆ, ಚರಂಡಿಗಳ ಕಾಮಗಾರಿ, ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ.
ಕುಡಿಯುವ ನೀರಿಗೆ ಹೆಚ್ಚಿನ ಗಮನಹರಿಸುವ ಮೂಲಕ ಬೇಸಿಗೆ ಸಮೀಪಿಸುತ್ತಿರುವುದರಿಂದ ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಮಾಡಿಸಿ ಟ್ಯಾಂಕರುಗಳ ಮೂಲಕ ನೀರು ಸರಬರಾಜು ಮಾಡಿ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲೆ ಬಿಜೆಪಿ ಸರ್ಕಾರವು ಪುರಸಭೆಗಳಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವುದರಿಂದ ಈ ಭಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಡೂರು, ಬೀರೂರು ಪಟ್ಟಣಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಎಸ್. ಸೋಮಪ್ರಸಾದ್, ಅಭ್ಯರ್ಥಿ ನಾಗರಾಜ್, ಮುಖಂಡರಾದ ಬಾಬು, ಕೃಷ್ಣಮೂರ್ತಿ, ರಮೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.