ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
ಕ.ಪ್ರ ವಾರ್ತೆ, ನರಸಿಂಹರಾಜಪುರ, ಮಾ.3
ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ನರಸಿಂಹರಾಜಪುರ ಜ್ವಾಲಾಮಾಲಿನಿ ಜೇಸಿ ಸಂಸ್ಥೆ, ಲಯನ್ಸ್ ಕ್ಲಬ್, ಪುಷ್ಪ ಸೇವಾ ಸಮಾಜ ಮತ್ತು ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 3 ದಿನಗಳಿಂದ ನಡೆಯುತ್ತಿದ್ದ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ 22 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಲಾಯಿತು.
200 ಜನರ ನೇತ್ರ ಪರೀಕ್ಷೆ ಮಾಡಲಾಯಿತು. ಇವರಲ್ಲಿ ಕಣ್ಣಿನ ಸಮಸ್ಯೆ ಇದ್ದ 22 ಜನರಿಗೆ ಶನಿವಾರ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಭಾನುವಾರ ನೇತ್ರ ವೈದ್ಯರು ಸೂಕ್ತ ತಿಳುವಳಿಕೆ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದರು.
ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಸುಧಾ, ತರೀಕೆರೆ ಸರ್ಕಾರಿ ಆಸ್ಪತ್ರೆಯ ನೇತ್ರ ತಜ್ಞೆ ಡಾ. ಭಾಗ್ಯ, ನ.ರಾ.ಪುರ ಸರ್ಕಾರಿ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಸೌಮ್ಯ, ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಯ ನೇತ್ರಾಧಿಕಾರಿ ಕೃಷ್ಣಮೂರ್ತಿ ಶಸ್ತ್ರ ಚಿಕಿತ್ಸೆ ನಡೆಸಿದರು.
ಜ್ವಾಲಾಮಾಲಿನಿ ಜೇಸಿ ಸಂಸ್ಥೆ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಸಹಕಾರ ನೀಡಿದರು.
ಶಿಕ್ಷಕರ ಸಮಾಲೋಚನಾ ಸಭೆ
ಕನ್ನಡ ಪ್ರಭ ವಾರ್ತೆ, ಶೃಂಗೇರಿ, ಮಾ.4
ಪ್ರತಿಯೊಂದು ಶಾಲೆಯಲ್ಲಿ ಶಿಕ್ಷಕ ಹಾಗೂ ಪೋಷಕರ ನಡುವಿನ ಹೊಂದಾಣಿಕೆಯಿಂದ ಶಾಲೆಯ ಅಭಿವೃದ್ಧಿ ಸಾಧ್ಯ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಕೆ.ಜಿ. ಸಿದ್ದಲಿಂಗೇ ಗೌಡ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ವೆಲ್ ಕಮ್ ಗೇಟ್ ಬಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದ ಪಟ್ಟಣ ಕ್ಲಸ್ಟರ್ ಮಟ್ಟದ ಶಿಕ್ಷಕರ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಇಂತಹ ಸಭೆಗಳಲ್ಲಿ ಮಹತ್ವದ ವಿಚಾರಗಳು ಹೊರಬರುತ್ತವೆ. ಹಲವಾರು ವಿಚಾರಗಳ ಮಂಡನೆಯಾಗುತ್ತವೆ. ಇವುಗಳ ಸದುಪಯೋಗವಾಗಬೇಕು.ಒಂದು ಶಾಲೆಯ ಅಭಿವೃದ್ಧಿಯಲ್ಲಿ ಶಿಕ್ಷಕ, ವಿದ್ಯಾರ್ಥಿಗಳು ಹಾಗೂ ಪೋಷಕರ ಪಾತ್ರ ಮಹತ್ತರವಾಗಿದೆ. ಸರ್ಕಾರಗಳಿಂದ ಸಿಗುವ ಸೌಲಭ್ಯಗಳ ಸದ್ಗಳಕೆಯಾಗಬೇಕು ಎಂದರು.
ಅಬ್ದಲ್ ಖಾದರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಂಗಪ್ಪ, ರಶ್ಮಿ, ಲಲಿತಾ .ಜಿ. ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

