ಚಿಕ್ಕಮಗಳೂರು

ಎಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ

Published On :

ಕ.ಪ್ರ. ವಾರ್ತೆ ಚಿಕ್ಕಮಗಳೂರು  ಮಾ. 3
ರಜೆಯ ವಿಚಾರದಲ್ಲಿ ಬೆಂಗಳೂರು ನಗರದಲ್ಲಿ ಪೇದೆಯೊಬ್ಬ ಎಸ್‌ಐ ಮೇಲೆ ಶೂಟೌಟ್ ಮಾಡಿ ಹತ್ಯೆಗೈದ ಘಟನೆ ಮಾಸುವ ಮುನ್ನವೇ, ಚಿಕ್ಕಮಗಳೂರಿನಲ್ಲಿ ಪೇದೆಯೊಬ್ಬ ಕರ್ತವ್ಯ ನಿಯೋಜನೆಗೆ ಸಂಬಂಧಿಸಿದಂತೆ ಎಎಸ್‌ಐ ಮೇಲೆ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಕೇಂದ್ರದಲ್ಲಿ ಶನಿವಾರ ಸಂಜೆ ನಡೆದಿದೆ.
ಹಲ್ಲೆಗೆ ಒಳಗಾದ ಎಎಸ್‌ಐ ವಾಸುದೇವ್ ಇಲ್ಲಿನ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿರುವ ಪೇದೆ ಆನಂದ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಹಿಂದೆ, ಮೀಸಲು ಪಡೆಯ ಇನ್ಸ್‌ಪೆಕ್ಟರ್ ಬಸವರಾಜ್ ಅವರೊಂದಿಗೆ ಅನುಚಿತವಾಗಿ ಆನಂದ್ ವರ್ತಸಿದ್ದರು. ಈ ಕುರಿತು ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದ್ದು, ಈ ತನಿಖೆಯನ್ನು ಮೂಡಿಗೆರೆಯ ಇನ್ಸ್‌ಪೆಕ್ಟರ್ ರಮೇಶ್ ಅವರು ನಡೆಸುತ್ತಿದ್ದಾರೆ. ಶನಿವಾರದಂದು ವಿಚಾರಣೆಗೆ ಹಾಜರಾಗಿದ್ದ ಆನಂದ್ ವಾಪಸ್ ಕೊಪ್ಪಕ್ಕೆ ತೆರಳುವ ಮುನ್ನ ಎಎಸ್‌ಐ ವಾಸುದೇವ್ ಅವರೊಂದಿಗೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಬಸವನಹಳ್ಳಿ ಠಾಣೆ ಪೊಲೀಸರು ಆನಂದನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.