ಚಿಕ್ಕಮಗಳೂರು

ಅಲ್ಪಸಂಖ್ಯಾತರಿಗೆ ಮಾತ್ರ ಆಳುವ ಶಕ್ತಿ

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 4
ದೇಶದಲ್ಲಿ ಅಲ್ಪಸಂಖ್ಯಾತರಿಗೆ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮಾತ್ರ ಸರ್ಕಾರ ಆಳುವ ಶಕ್ತಿ ಇದೆ ಎಂದು ಮಾಜಿ ಸಚಿವ ಸಿ.ಆರ್. ಸಗೀರ್ ಅಹಮದ್ ಹೇಳಿದ್ದಾರೆ.
ನಗರಸಭೆ ಚುನಾವಣೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಸೋಮವಾರ ಹಿರೆಮಗಳೂರಿನಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಎಚ್.ಎಸ್. ಪುಟ್ಟಸ್ವಾಮಿ ಪರ ಮತ ಯಾಚಿಸಿ ನಂತರ ನಡೆದ ಸಭೆಯಲ್ಲಿ ಮಾತನಾಡಿದರು.
ದೇಶದ ಆಡಳಿತವನ್ನು ಉತ್ತಮವಾಗಿ ನಡೆಸಬಲ್ಲೆವು ಎಂಬುದನ್ನು ಜಗಜೀವನ್ ರಾಂ ಕಾಲದಿಂದ ಇಂದಿನ ಮೀರಾ ಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಡಾ.ಜಿ. ಪರಮೇಶ್ವರ್‌ವರೆಗೂ ತೋರಿಸಿದ್ದಾರೆ. ಇದಕ್ಕೆ ಕಾರಣ ಕಾಂಗ್ರೆಸ್ ಪಕ್ಷ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿದ್ದು ಪ್ರತಿಪಕ್ಷಗಳಿಗೆ ಕೆಲಸ ಮಾಡುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಸೂಕ್ತಕ್ರಮ ಜರುಗಿಸಲಾಗುತ್ತದೆ ಎಂದರು.
ಸತ್ವಪರೀಕ್ಷೆಗೆ: ಅಭ್ಯರ್ಥಿ ಎಚ್.ಎಸ್. ಪುಟ್ಟಸ್ವಾಮಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ರಾಜಕೀಯಕ್ಕೆ ಧುಮುಕುವ ಮೂಲಕ ಸತ್ವ ಪರೀಕ್ಷೆಗೆ ಒಳಗಾಗಿದ್ದೇನೆ. ನಮ್ಮ ತಂದೆಯವರು ಜೀತದಾಳಾಗಿ ಕೆಲಸ ಮಾಡಿ ನಮ್ಮನ್ನು ಕೂಲಿನಾಲಿ ಮಾಡಿ ವಿದ್ಯಾವಂತರನ್ನಾಗಿ ಮಾಡಿದರು. ಇಂದಿರಾಗಾಂಧಿಯವರ ಕಾಲದಲ್ಲಿ ಜೀತಪದ್ಧತಿ ನಿರ್ಮೂಲನೆ, ಉಳುವವನೆ ಭೂಮಿಯ ಒಡೆಯ ಪದ್ಧತಿ ಜಾರಿಗೆ ಬಂದ ಸಂದರ್ಭದಲ್ಲಿ ತಂದೆ ಜೀತಮುಕ್ತರಾದರು. ಅದರ ಋಣ ತೀರಿಸಲೆಂದು ಕಾಂಗ್ರೆಸ್ ತತ್ವ ಸಿದ್ಧಾಂತ ಮೆಚ್ಚಿ ಪಕ್ಷದಲ್ಲಿ ಅಭ್ಯರ್ಥಿಯಾಗಿದ್ದೇನೆ ಎಂದರು.
ನನ್ನ ಹೆಸರಿನ ಹಿಂದೆ ಗ್ರಾಮದ ಹೆಸರನ್ನು ಅಳವಡಿಸಿಕೊಳ್ಳುವ ಮೂಲಕ ಊರಿಗೆ ಒಳ್ಳೆಯ ಹೆಸರನ್ನು ತಂದಿದ್ದೇನೆ ಹೊರತು ಕಳಂಕ ತರುವ ಯಾವುದೇ ಕೆಟ್ಟ ಕೆಲಸ ಮಾಡಿಲ್ಲ.   ಮುಂದೆಯೂ ಊರಿನ ಋಣ ತೀರಿಸಲು ಬದ್ಧನಾಗಿದ್ದೇನೆಂದು ಭಾವುಕರಾಗಿ ನುಡಿದರು.
ಪಕ್ಷಕ್ಕೆ ಸೇರ್ಪಡೆಗೊಂಡ ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ್ ಅವರನ್ನು  ಸ್ವಾಗತಿಸಲಾಯಿತು. ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಸಿಡಿಎ ಮಾಜಿ ಅಧ್ಯಕ್ಷ ಅತೀಕ್  ಖೈಸರ್, ನಗರಸಭೆ ಮಾಜಿ ಸದಸ್ಯ ಬಿ.ಎಂ. ಸಂದೀಪ್, ರಾಮಚಂದ್ರ, ಶಾಂತೇಗೌಡ, ಚಂದ್ರಪ್ಪ, ಶಿವಕುಮಾರ್, ಜಗದೀಶ್, ಇಂದಾವರ ಲೋಕೇಶ್, ವಕೀಲ ಶಿವಣ್ಣ, ಐಶ್ವರ್ಯ ಮಹೇಶ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.