ಕಾದಾಡುತ್ತಿರುವುದೇ ಬಿಜೆಪಿ ಸಾಧನೆ
ಕ.ಪ್ರ ವಾರ್ತೆ, ಮೂಡಿಗೆರೆ, ಮಾ.4
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುತ್ತಾ ಕುರ್ಚಿಗಾಗಿ ಕಾದಾಡುತ್ತಿರುವುದೇ ಬಹುದೊಡ್ಡ ಸಾಧನೆಯಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಜಿ.ಎಚ್. ಹಾಲಪ್ಪಗೌಡ ತಿಳಿಸಿದ್ದಾರೆ.
ಪಟ್ಟಣದ ಜೆ.ಎಂ.ರಸ್ತೆಯಲ್ಲಿ ಮತಯಾಚನೆ ಮಾಡುತ್ತಾ ಪತ್ರಕರ್ತರೊಂದಿಗೆ ಮಾತನಾಡಿ, ಜನರ ನಿರೀಕ್ಷೆಗೆ ತಕ್ಕಂತೆ ರಾಜ್ಯ ಬಿಜೆಪಿ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಮೂಡಿಗೆರೆ ಪಟ್ಟಣ ಪಂಚಾಯತ್‌ನಲ್ಲಿ ನಾಲ್ಕೂವರೆ ವರ್ಷಗಳ ಕಾಲ ಬಿಜೆಪಿ ತೆಕ್ಕೆಯಲ್ಲಿದೆ. ಪಟ್ಟಣ ಅಭಿವೃದ್ಧಿಪಡಿಸುವ ಬದಲು ಸ್ವ ಅಭಿವೃದ್ಧಿ ಮಾಡಿಕೊಂಡು ಅಭಿವೃದ್ಧಿಯಲ್ಲಿ ಹಿನ್ನಡೆ ಸಾಧಿಸಿದೆ. ಪಟ್ಟಣದ ಪ್ರತಿ ವಾರ್ಡ್‌ಗಳಲ್ಲೂ ಕಳಪೆ ಕಾಮಗಾರಿಯಿಂದ ಕೂಡಿದ್ದಾಗಿದೆ. ಕಳೆದ ಬಾರಿ ಮತ ನೀಡಿ ಗೆಲ್ಲಿಸಿದ ಮತದಾರರೆ ಸಾಕಪ್ಪ ಸಾಕು ಬಿಜೆಪಿ ಸಹವಾಸ ಎನ್ನುತ್ತಿದ್ದಾರೆ. ಈ ಬಾರಿ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಪಡೆಯಲಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿರುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಪಂ ಅಭ್ಯರ್ಥಿ ಮದೀಶ್, ಸಿ.ಎಂ. ಗೋಪಾಲಗೌಡ, ಮೊಯಿದ್ದಿನ್, ಕೃಷ್ಣೇಗೌಡ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

